ದಿನಾಂಕ 23-03-2025 ರಂದು ಆದಿತ್ಯವಾರ ಸಂಜೆ 3 ಗಂಟೆಗೆ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ಉಡುಪಿ ಜಿಲ್ಲಾ ಘಟಕ ಸಭೆ ನಡೆಯಲಿದೆ.
ಸಭೆ ಮುಖ್ಯಾಂಶಗಳು : 👉 ತುಳುನಾಡ ರಕ್ಷಣಾ ವೇದಿಕೆ ಸಂಘಟನೆಗೆ ಹಲವಾರು ಗಣ್ಯರ ಸೇರ್ಪಡೆ ಇದೆ.
👉 ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ವತಿಯಿಂದ ತುಳುನಾಡ ರಕ್ಷಣಾ ವೇದಿಕೆ 15 ವರ್ಷ ನಿರಂತರ ಸೇವೆ ಸಲ್ಲಿಸಿ 16 ನೇ ವರ್ಷಾಚರಣೆ ಅಂಗವಾಗಿ ತುಳು ಸಮ್ಮೇಳನ ನಡೆಸುವ ಬಗ್ಗೆ ರಾಜ್ಯ ಮತ್ತು ರಾಷ್ಟ್ರ ಮಟ್ಟದ ನಾಯಕರನ್ನು ಆಹ್ವಾನಿಸುವುದು ಸೇರಿದಂತೆ ಮತ್ತಿತರರ ಮಹತ್ವದ ವಿಷಯಗಳ ಸಮಾಲೋಚನೆ
👉 ಜಿಲ್ಲಾ ಘಟಕ ಅಭಿವೃದ್ಧಿ ದೃಷ್ಟಿಯಿಂದ ಕೆಲವು ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಬಗ್ಗೆ
ಈ ಸಭೆಗೆ ಜಿಲ್ಲಾ ಘಟಕ, ಕಾರ್ಮಿಕ ಘಟಕ, ಮಹಿಳಾ ಘಟಕದ ಅಧ್ಯಕ್ಷರು ಮತ್ತು ಜಿಲ್ಲೆಯ ಎಲ್ಲಾ ತಾಲೂಕುಗಳು ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ತಪ್ಪದೇ ಆಗಮಿಸಬೇಕೆಂದು ಉಡುಪಿ ಜಿಲ್ಲಾ ತುಳುನಾಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರಾದ ಫ್ರಾಂಕಿ ಡಿಸೋಜ ಕೊಳಲಗಿರಿ ವಿನಂತಿಸಿದ್ದಾರೆ. ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಸೂಕ್ತ ಸಲಹೆ ಸೂಚನೆ ನೀಡಬೇಕಾಗಿ ಕೋರಿರುತ್ತಾರೆ
