ಉಳ್ಳಾಲ:ಬೆಂಗಳೂರು ಮೂಲದ ತಂಡ ಬಟ್ಟಪ್ಪಾಡಿಯ ಖಾಸಗಿ ಗೆಸ್ಟ್ ಹೌಸ್ ನಲ್ಲಿ ಹೊಡೆದಾಡಿಕೊಂಡು ಸ್ಥಳೀಯ ಮನೆಗಳಿಗೆ ನುಗ್ಗಿ ದಾಂಧಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಖಾಸಗಿ ಗೆಸ್ಟ್ ಹೌಸ್ ನಲ್ಲಿ ಆಯೋಜಿಸಿದ ಪಾರ್ಟಿಗೆ ಎರಡು ಬಸ್ ಗಳಲ್ಲಿ ಜನರು ಆಗಮಿಸಿದ್ದರು. ತಡರಾತ್ರಿವರೆಗೆ ಪಾರ್ಟಿ ನಡೆಸಿದ ತಂಡ ಬಳಿಕ ಹೊಡೆದಾಟ ಪ್ರಾರಂಭಿಸಿದ್ದಾರೆ ಗೆಸ್ಟ್ ಹೌಸ್ ಹೊರಗಡೆ ರಸ್ತೆ ಬಂದು ಕುಡಿದ ಅಮಲಿನಲ್ಲಿ
ಸ್ಥಳೀಯ ಮನೆಯೊಂದಕ್ಕೆ ನುಗ್ಗಿ ದಾಂದಲೆ ನಡೆಸಿದ್ದಾರೆ ಎಂದು ಸ್ಥಳೀಯರು ಅಪಾದಿಸಿದ್ದಾರೆ.
ಘಟನೆಯಲ್ಲಿ ಓರ್ವ ಗಾಯಗೊಂಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸುತ್ತಿದ್ದಂತೆ ಪರಾರಿಯಾಗಿದ್ದಾರೆ.
ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.