ಬೆಂಗಳೂರು : ಕರ್ನಾಟಕ ವಿಧಾನಸಭೆ ಚುಣಾವಣೆ ಹಿನ್ನೆಲೆಯಲ್ಲಿ ಸೋಮವಾರ ಬಿಜೆಪಿ ಪ್ರಜಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಕರ್ನಾಟಕದಲ್ಲೂ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲಾಗುವುದು ಎಂದು ಬಿಜೆಪಿಯು ತನ್ನ ಪ್ರಜಾ ಪ್ರಣಾಳಿಕೆಯಲ್ಲಿ ಘೋಷಿಸಿದೆ.
ಕಳೆದ ವರ್ಷ ಬಿಜೆಪಿ ಆಡಳಿತವಿರುವ ಹಲವು ರಾಜ್ಯಗಳು ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವ ಬಗ್ಗೆ ಪ್ರಸ್ತಾಪಿಸಿದ್ದವು. ಕೆಲವು ರಾಜ್ಯಗಳು ಉನ್ನತ ಮಟ್ಟದ ಸಮಿತಿ ರಚಿಸುವ ಘೋಷಣೆಯನ್ನೂ ಮಾಡಿದ್ದವರು. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಏಕರೂಪದ ನಾಗರಿಕ ಸಂಹಿತೆ ಜಾರಿ ಸಂಬಂಧ ಉನ್ನತ ಮಟ್ಟದ ಸಮಿತಿ ರಚಿಸುವ ಬಗ್ಗೆ ಹೇಳಿದ್ದರು. ಆದರೆ ಅದು ಕಾರ್ಯಗತಗೊಂಡಿರಲಿಲ್ಲ.
ಸೋಮವಾರ ಬಿಜೆಪಿಯು ಪ್ರಜಾಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಪ್ರಣಾಳಿಕೆಯಲ್ಲಿ ಉನ್ನತ ಮಟ್ಟದ ಸಮಿತಿ ಶಿಫಾರಸಿನ ಮೇಲೆ ಏಕರೂಪದ ನಾಗರಿಕ ಸಂಹಿತೆ ಜಾರಿಗೊಳಿಸುವ ಭರವಸೆ ನೀಡಿದೆ.