ಉಡುಪಿ : ಅಸ್ಪೃಶ್ಯತೆ ನಿವಾರಣೆ ಮತ್ತು ಸಾಮರಸ್ಯ ಬೆಳೆಸುವ ನಿಟ್ಟಿನಲ್ಲಿ ವಿನಯ್ ಸಾಮರಸ್ಯ ಯೋಜನೆಯನ್ನು ಈ ತಿಂಗಳ ಅಂತ್ಯ ಅಥವಾ ಮುಂದಿನ ತಿಂಗಳ ಮೊದಲ ವಾರದಿಂದ ಶುರು ಮಾಡಲಿದ್ದೇವೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಧರ್ಮಸ್ಥಳದ ಧರ್ಮಾಧಿ ಕಾರಿ ಡಾ| ಡಿ.ವಿರೇಂದ್ರ ಹೆಗ್ಗಡೆ ಸಹಿತವಾಗಿ ಧಾರ್ಮಿಕ ಮುಖಂಡರನ್ನು ಸೇರಿಸಿಕೊಂಡು ಅಸ್ಪೃಶ್ಯತೆ ನಿವಾರಿಸಲು ದೊಡ್ಡ ಅಭಿಯಾನ ನಡೆಸಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದ ಗ್ರಾಮ ಪಂಚಾಯಿತಿ ಮತ್ತು ಸ್ಥಳೀಯಾಡಳಿತಗಳಲ್ಲಿ ಸಾಮಾಜಿಕ ನ್ಯಾಯ ಸಮಿತಿ ಮೂಲಕ ಈ ಅಭಿಯಾನ ನಡೆಸಿ, ಅಸ್ಪೃಶ್ಯತೆ ಮುಕ್ತ ಗ್ರಾಮ, ನಗರಾಡಳಿತಗಳಿಗೆ ಇಲಾಖೆ ಯಿಂದ ಪ್ರೋತ್ಸಾಹ ನೀಡಲಾಗುವುದು ಎಂದರು.

