ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಮಂಗಳೂರು, ತನ್ನ 2024-2025 ಸಾಲಿನಲ್ಲಿ ಅತ್ಯುತ್ತಮ ಸಾಧನೆಗೈದು ಕಾರ್ಯನಿರ್ವಹಿಸುತ್ತಿರುವ ‘ಅ’ ವರ್ಗದ ಸಹಕಾರಿ ಸಂಘಗಳಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡುತ್ತಿದೆ. ಈ ಸಾಲಿನಲ್ಲಿ ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘವು ಜಿಲ್ಲಾ ಬ್ಯಾಂಕಿನ ತೃತೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಇದು ಸಂಘದ ಗಮನಾರ್ಹ ಸಾಧನೆಗೆ ಸಾಕ್ಷಿಯಾಗಿದೆ.

ಅಗಸ್ಟ್ 30ರಂದು ನಡೆದ ಮಹಾಸಭೆಯಲ್ಲಿ ಜಿಲ್ಲಾ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಈ ಸಾಧನೆಯನ್ನು ಪ್ರಶಂಸಿಸಿ, ಉಪ್ಪೂರು ಸಂಘದ ಅಧ್ಯಕ್ಷ ಎನ್. ರಮೇಶ್ ಶೆಟ್ಟಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂದೀಪ ಶೆಟ್ಟಿ ಅವರಿಗೆ ಪ್ರಶಸ್ತಿ ಪತ್ರ ಮತ್ತು ಸನ್ಮಾನ ಗೌರವ ನೀಡಿ ಅಭಿನಂದಿಸಿದರು.

ಈ ಸನ್ಮಾನ ಸಮಾರಂಭದಲ್ಲಿ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರು ಅಶೋಕ ಕುಮಾರ್ ಶೆಟ್ಟಿ ಬೆಳ್ಳಂಪಳ್ಳಿ, ರಾಜೇಶ್ ರಾವ್ ಪಾಂಗಾಳ, ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಮತ್ತು ಉಡುಪಿ ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕ ಶ್ರೀಮತಿ ಲಾವಣ್ಯ ಕೆ.ಆರ್. ಅವರು ಉಪಸ್ಥಿತರಿದ್ದರು.
