Tuesday, July 16, 2024
spot_img
More

    Latest Posts

    ಸುಳ್ಯ; ಆಸ್ತಿ ವಿಚಾರದಲ್ಲಿ ಗಲಾಟೆ; ಅಣ್ಣನನ್ನು ಇರಿದು ಕೊಲೆಗೈದ ತಮ್ಮಂದಿರು

    ಸುಳ್ಯ; ಆಸ್ತಿ ವಿಚಾರಕ್ಕೆ ಸಂಬಂಧಿಸಿ ತಮ್ಮಂದಿರು ಸೇರಿ ಅಣ್ಣನನ್ನು ಇರಿದು ಕೊಲೆಗೈದ ಘಟನೆ ಭೀಕರ ಘಟನೆ ಸುಳ್ಯ ಸಂಪಾಜೆಯ ಸಮೀಪದ ಚೆಂಬು ಗ್ರಾಮದಲ್ಲಿ ನಡೆದಿದೆ.

    ಕುದ್ರೆಪಾಯ ನಿವಾಸಿ ಉಸ್ಮಾನ್ ಕೊಲೆಯಾದವರು.

    ಸತ್ತಾರ್, ರಫೀಕ್, ಇಸುಬು,ಅಬ್ಬಾಸ್, ಉಸ್ಮಾನ್ ಮೊದಲಾದ ಅಣ್ಣತಮ್ಮಂದಿರ ಕೃಷಿ ಭೂಮಿ ಸುಮಾರು 50 ಎಕ್ರೆ ಜಾಗ ಕುದ್ರೆಪಾಯದಲ್ಲಿದ್ದು ಜಾಗದ ತಕರಾರಿನಿಂದಾಗಿ ವಿವಾದವಿತ್ತು.

    ಶುಕ್ರವಾರ ಇವರು ಚೆಂಬು ಗ್ರಾಮದ ಕುದ್ರೆಪಾಯದ ಸಮೀಪ ಇರುವ ಜಾಗಕ್ಕೆ ಇವರು ಹೋಗಿದ್ದರು. ಈ ವೇಳೆ ಆಸ್ತಿ ವಿಚಾರದಲ್ಲಿ ಸಹೋದರರ ನಡುವೆ ಮಾತಿಗೆ ಮಾತು ಬೆಳೆದಿದೆ. ತೀವ್ರ ಚರ್ಚೆ ನಡೆದು ಕೋಪದ ತೀವ್ರತೆಯಲ್ಲಿ ಸಹೋದರರು ಸೇರಿ ಚೂರಿಯಿಂದ ಇರಿದು ಉಸ್ಮಾನ್ ನನ್ನು ಹತ್ಯೆ ನಡೆಸಿರುವುದಾಗಿ ತಿಳಿದುಬಂದಿದೆ.

    ಈ ಕುರಿತು ಸಂಪಾಜೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.ಹೆಚ್ಚಿನ ಮಾಹಿತಿ ಈ ಕುರಿತು ನಿರೀಕ್ಷಿಸಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss