Saturday, July 27, 2024
spot_img
More

    Latest Posts

    ಮಂಗಳೂರು: ನಾಗಾರಾಧನೆಗೆ ಸ್ವಂತ ಸ್ಥಳವನ್ನು ದಾನ ಮಾಡಿದ ಸ್ಪೀಕರ್ ಯು.ಟಿ.ಖಾದರ್

    ಮಂಗಳೂರು: ರಾಜ್ಯ ವಿಧಾನಸಭೆ ಸಭಾಪತಿ ಯು.ಟಿ ಖಾದರ್ .ಖಾದರ್ ಅವರು ವಿಟ್ಲ ಸಮೀಪದ ಪುಣಚ ಪರಿಯಾಲ್ತಡ್ಕದಲ್ಲಿರುವ ತಮ್ಮ ಜಮೀನಿನಲ್ಲಿರುವ ನಾಗನ ಸಾನಿಧ್ಯದ ಜಾಗವನ್ನು ಅದರ ವಾರಸುಧಾರರಿಗೆ ಉಚಿತವಾಗಿ ನೀಡಿದ್ದಾರೆ.

    ಹಿಂದಿನ ಹಿರಿಯರ ಕಾಲದಲ್ಲಿ ಖಾದರ್ ಅವರ ಸೊತ್ತು ದಳವಾಯಿ ಕುಟುಂಬದ ಅಧೀನದಲ್ಲಿತ್ತು. ಭೂಮಸೂದೆ ಕಾನೂನಿನಲ್ಲಿ ಖಾದರ್ ಕುಟುಂಬದ ಹಿರಿಯರಿಗೆ ಆ ಜಮೀನು ಸಿಕ್ಕಿತ್ತು. ಪಾಲು ಮಾಡುವಾಗ ಪಿತ್ರಾರ್ಜಿತ ಸೊತ್ತಾಗಿ ಖಾದರ್ ಪಾಲಾಯಿತು. ದಳವಾಯಿ ಕುಟುಂಬದ ನಾಗನ ಕಟ್ಟೆ ಅದೇ ಜಮೀನಲ್ಲಿತ್ತು.

    ದಳವಾಯಿ ಕುಟುಂಬದ ನಾಗಸಾನಿಧ್ಯ ಮುಸ್ಲಿಂ ಧರ್ಮದವರ ಸ್ಥಳದಲ್ಲಿರುವುದರಿಂದ ಅವರು ಬೇರೆ ಕಡೆ ಆರಾಧನೆ ಮಾಡುತ್ತಿದ್ದರು. ಮೂಲಸ್ಥಾನದ ನಾಗಕಟ್ಟೆಯಲ್ಲಿ ಪೂಜೆಯಾಗದೇ ಇರುವುದರಿಂದ ದಳವಾಯಿ ಕುಟುಂಬಕ್ಕೆ ಸಮಸ್ಯೆ ತಲೆದೋರಿತ್ತು. ಅಷ್ಟಮಂಗಳ ಪ್ರಶ್ನೆ ಇಟ್ಟಾಗ ಮೂಲ ಜಾಗದಲ್ಲಿ ಪೂಜೆ ನಡೆಯಬೇಕೆಂದು ಕಂಡು ಬಂತಾದರೂ ಅವರಿಗೆ ಆರಾಧನೆಗೆ ತೊಡಕಾಗಿತ್ತು. ಕೊನೆಗೂ ಬೇರೆ ದಾರಿ ಕಾಣದೆ ದಳವಾಯಿ ಕುಟುಂಬ ನಾಗನಕಟ್ಟೆಯ ಆ ಜಾಗದ 10 ಸೆಂಟ್ಸ್ ಸ್ಥಳ ಖರೀದಿಗೆ ಯು.ಟಿ.ಖಾದರ್ ಅವರಿಗೆ ಬೇಡಿಕೆ ಇಟ್ಟಿತು. ವಿಷಯ ತಿಳಿದ ಖಾದರ್ ಆ ಪರಿಸರದ 10ಕ್ಕೆ 10 ಸೆಂಟ್ಸ್ ಸೇರಿಸಿ ಒಟ್ಟು 20 ಸೆಂಟ್ಸ್ ಸ್ಥಳವನ್ನು ದಳವಾಯಿ ಕುಟುಂಬಕ್ಕೆ ಉಚಿತವಾಗಿ ಬಿಟ್ಟುಕೊಟ್ಟು ಉದಾರತೆ, ಮಾನವೀಯತೆ ಮೆರೆದರು.

    ಇದೀಗ ಹಲವು ವರ್ಷಗಳಿಂದ ಅಲ್ಲಿ ವಿಜ್ರಂಬಣೆಯ ನಾಗಾರಾಧನೆ ನಡೆಯುತ್ತಿದೆ. ನಾಗರ ಪಂಚಮಿಯ ಈ ದಿನ ದಳವಾಯಿ ಕುಟುಂಬಿಕರೆಲ್ಲಾ ಅಲ್ಲಿ ಬಂದು ಸೇರುತ್ತಾರೆ. ಪೂಜೆ ಪುನಸ್ಕಾರಗಳು ಸಾಂಗವಾಗಿ ನಡೆಯುತ್ತದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss