ಉತ್ತರಕನ್ನಡ: ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ನಾಲ್ವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆದಿದೆ.
ಬೆಂಗಳೂರು ಮೂಲದ ಅರ್ಜುನ್, ಚೈತ್ರಶ್ರೀ, ತೇಜಸ್ ಡಿ., ಕಿರಣ್ ಕುಮಾರ್ ನೀರು ಪಾಲಾದ ವಿದ್ಯಾರ್ಥಿಗಳು. ಈ ಪೈಕಿ ಅರ್ಜುನ್, ಚೈತ್ರಶ್ರೀ ಅವರ ಮೃತದೇಹ ಪತ್ತೆಯಾಗಿದ್ದು, ನಾಪತ್ತೆಯಾಗಿರುವವರಿಗೆ ಹುಡುಕಾಟ ನಡೆಯುತ್ತಿದೆ.ಬೆಂಗಳೂರಿನಿಂದ 87 ಮಂದಿ ವಿದ್ಯಾರ್ಥಿಗಳ ಪ್ರವಾಸಕ್ಕೆಂದು ಉತ್ತರ ಕನ್ನಡದ ಕುಮಟಾ ತಾಲೂಕಿನ ಕುಮಟಾದ ಸಿಲ್ವರ್ ಸ್ಯಾಂಡ್ ರೆಸಾರ್ಟ್‌ಗೆ ಬಂದಿದ್ದರು. ಈ ವೇಳೆ ಬಾಡ ಗ್ರಾಮದಲ್ಲಿ ಸಮುದ್ರದಲ್ಲಿ ವಿದ್ಯಾರ್ಥಿಗಳು ನೀರಿಗಿಳಿದಿದ್ದರು. ಈ ವೇಳೆ ನಾಲ್ವರು ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ. ಸ್ಥಳಕ್ಕೆ ಕುಮಟಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ನಾಪತ್ತೆಯಾದ ವಿದ್ಯಾರ್ಥಿಗಳ ಪತ್ತೆಗಾಗಿ ಅಗ್ನಿಶಾಮಕ ದಳ ಪೊಲೀಸರು ಹಾಗೂ ಸ್ಥಳೀಯರಿಂದ ಶೋಧ ಕಾರ್ಯ ನಡೆಯುತ್ತಿದೆ.