Saturday, October 5, 2024
spot_img
More

    Latest Posts

    ಭಾರೀ ಮಳೆ ಹಿನ್ನೆಲೆಯಲ್ಲಿ ಇಂದು ಸುಳ್ಯ, ಕಡಬ ತಾಲೂಕಿನ ಶಾಲಾ ಕಾಲೇಜಿಗೆ ರಜೆ

    ದ.ಕ ಜಿಲ್ಲೆಯ ವಿವಿಧ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಅದರಲ್ಲೂ ಸುಬ್ರಹ್ಮಣ್ಯ ಕಲ್ಮಕಾರು , ಕೊಲ್ಲ ಮೊಗ್ರು , ಹರಿಹರ , ಬಾಳುಗೋಡು ಐನಕಿದು ಗ್ರಾಮದಲ್ಲಿ ಸೋಮವಾರ ಸಂಜೆ ಭಾರೀ ಮಳೆಯಾಗಿದ್ದು, ಜಳಪ್ರಳಯವೇ ಸಂಭವಿಸಿದೆ.

    ಭಾರೀ ಮಳೆ ಮುಂದುವರಿದಿದ್ದು, ನದಿ , ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಸುಳ್ಯ ಹಾಗೂ ಕಡಬ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜು ಗಳಿಗೆ ಆ. 2 ರಂದು ಜಿಲ್ಲಾಧಿಕಾರಿ ಡಾ. ಕೆವಿ . ರಾಜೇಂದ್ರ ರಜೆ ಘೋಷಣೆ ಮಾಡಿದ್ದಾರೆ.ತಾಲೂಕಿನ ಹಲವೆಡೆ ಭೂಕುಸಿತ ಸಂಭವಿಸಿದ್ದು, ಭಾರೀ ಮಳೆಯಿಂದ ದರ್ಪಣ ತೀರ್ಥ ನದಿ, ಆದಿ ಸುಬ್ರಹ್ಮಣ್ಯ ಕ್ಷೇತ್ರದ ಒಳಗೆ ಪ್ರವೇಶಿತು.ಮಳೆಯ ಭೀಕರತೆಗೆ ಕಲ್ಮಕಾರು , ಕೊಲ್ಲ ಮೊಗ್ರು , ಹರಿಹರ , ಬಾಳುಗೋಡು ಈ ನಾಲ್ಕು ಗ್ರಾಮಗಳು ಸಂಪೂರ್ಣ ಸಂಪರ್ಕ ಕಡಿತಗೊಂಡಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss