Tuesday, March 19, 2024
spot_img
More

    Latest Posts

    ವಾಹನ ಸವಾರರಿಗೆ ಗುಡ್‌ ನ್ಯೂಸ್:‌ ಇನ್ಮುಂದೆ ಸುಖಾಸುಮ್ಮನೆ ವಾಹನ ನಿಲ್ಲಿಸಿ ದಾಖಲೆ ಪರಿಶೀಲಿಸುವಂತಿಲ್ಲ

    ರಸ್ತೆಯಲ್ಲಿ ಹೋಗುವ ವೇಳೆ ಟ್ರಾಫಿಕ್‌ ಪೊಲೀಸರು ಏಕಾಏಕಿ ಕೈ ಅಡ್ಡ ಹಾಕಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದರು. ಇದರಿಂದ ಟ್ರಾಫಿಕ್‌ ಜಾಮ್‌ ಆಗುತ್ತಿತ್ತಲ್ಲದೇ ಸವಾರರೂ ಸಹ ಕಿರಿಕಿರಿ ಅನುಭವಿಸುವಂತಾಗಿತ್ತು. ತುರ್ತಾಗಿ ಎಲ್ಲದರೂ ಹೋಗಬೇಕಿದ್ದವರು ತಮ್ಮ ವಾಹನ ಅಡ್ಡಗಟ್ಟಿದ ವೇಳೆ ದಾಖಲೆಗಳು ಸರಿಯಾಗಿದ್ದರೂ ಸಹ ತಮ್ಮ ಸರದಿ ಬರುವವರೆಗೂ ಕಾಯಬೇಕಾಗಿತ್ತು.

    ಇದರಿಂದ ರೋಸತ್ತು ಹೋಗಿದ್ದ ಸಾರ್ವಜನಿಕರು, ಉನ್ನತಾಧಿಕಾರಿಗಳಿಗೆ ಪದೇ ಪದೇ ದೂರು ಸಲ್ಲಿಸುತ್ತಿದ್ದರು. ಇದೀಗ ಈ ಸಮಸ್ಯೆಗೆ ಅಂತ್ಯ ಹಾಡಲು ಡಿಜಿ & ಐಜಿಪಿ ಪ್ರವೀಣ್‌ ಸೂದ್‌ ಮುಂದಾಗಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟ್ಟರ್‌ ನಲ್ಲಿ ಟ್ವೀಟ್‌ ಮಾಡಿರುವ ಅವರು, ಕಣ್ಣಿಗೆ ಕಾಣುವಂತಹ ತಪ್ಪುಗಳನ್ನು ವಾಹನ ಸವಾರರು ಮಾಡಿದ ವೇಳೆ ಅಂತವರನ್ನು ಹಾಗೂ ಕುಡಿದು ವಾಹನ ಚಲಾಯಿಸುವವರ ದಾಖಲೆಗಳನ್ನು ಮಾತ್ರ ಪರಿಶೀಲಿಸಬೇಕು ಎಂದು ತಿಳಿಸಿದ್ದಾರೆ.

    ಅಂದರೆ ಹೆಲ್ಮೆಟ್‌ ಇಲ್ಲದೆ ವಾಹನ ಚಾಲನೆ ಮಾಡುವವರು, ತ್ರಿಬ್ಬಲ್‌ ರೈಡಿಂಗ್‌, ಸಿಗ್ನಲ್‌ ಜಂಪ್‌ ಮಾಡುವುದು ಮೊದಲಾದ ಕಣ್ಣಿಗೆ ಕಾಣುವಂತಹ ಟ್ರಾಫಿಕ್‌ ನಿಮಗಳನ್ನು ಉಲ್ಲಂಘಿಸಿದ ವೇಳೆ ಅಂತಹ ವಾಹನ ಸವಾರರನ್ನು ತಡೆದು ದಾಖಲೆಗಳನ್ನು ಪರಿಶೀಲಿಸಬಹುದಾಗಿದೆ. ಆದರೆ ತಪಾಸಣೆ ಹೆಸರಲ್ಲಿ ರಸ್ತೆಯಲ್ಲಿ ಬರುವ ಎಲ್ಲ ವಾಹನಗಳನ್ನು ಅಡ್ಡಗಟ್ಟಿ ದಾಖಲೆ ಪರಿಶೀಲಿಸಲು ಇನ್ನು ಮುಂದೆ ಅವಕಾಶವಿರುವುದಿಲ್ಲ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss