Friday, April 26, 2024
spot_img
More

    Latest Posts

    ಮಂಗಳೂರು: ಹಿರಿಯ ನಾಟಕಕಾರ, ವಜ್ರನೇತ್ರ ಪತ್ರಿಕೆ ಸಂಪಾದಕ ರತ್ನಾಕರ ರಾವ್ ನಿಧನ

    ಮಂಗಳೂರು: ಹಿರಿಯ ನಾಟಕಕಾರ, ನಿರ್ದೇಶಕ, ವಜ್ರನೇತ್ರ ಪತ್ರಿಕೆ ಸಂಪಾದಕ, ರತ್ನಾಕರ ರಾವ್ ಕಾವೂರುರವರು(81) ಇಂದು ಬೆಳಗ್ಗೆ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಸಾಮಾಜಿಕ, ಪೌರಾಣಿಕ, ಆಧ್ಯಾತ್ಮಿಕ, ನವ್ಯ ಮತ್ತು ಐತಿಹಾಸಿಕ ಹೀಗೆ ಐದು ಬಗೆಯ ನಾಟಕ ರಚನೆಯಲ್ಲಿ ಅವರದ್ದು ಗಮನಾರ್ಹ ಸಾಧನೆಯಾಗಿತ್ತು.

    ವಜ್ರನೇತ್ರ ಎಂಬ ಕನ್ನಡ ಪತ್ರಿಕೆಯ ಮೂಲಕ ಸಾಮಾಜಿಕ ಸಮಸ್ಯೆಗಳನ್ನು ಬಿಂಬಿಸಿ ಸರ್ಕಾರದ ಗಮನ ಸೆಳೆಯುತ್ತಿದ್ದ ಅವರು ಸುದೀರ್ಘ 60 ವರ್ಷಗಳ ಕಾಲ ಸರಸ್ವತಿಯ ಸೇವೆಗೈದಿದ್ದರು. ‘ನಾಟಕ ಕಲಾ ರತ್ನ’ ಬಿರುದಾಂಕಿತ ರತ್ನಾಕರ ರಾವ್ ಕಾವೂರುರವರು, ‘ಅಮ್ಮಾ ಕಟೀಲಮ್ಮಾ’, ತಬುರನ ತೆಲಿಕೆ, ಹಸುರು ಹೆಣ್ಣು, ಮಹಾತ್ಮಾ, ಸಾಮ್ರಾಟ್ ಸಂಕಣ್ಣ, ಶ್ರೀ ಗುರುರಾಘವೇಂದ್ರ, ನಳದಮಯಂತಿ, ಅಮರ ನಾರಿ ಅಬ್ಬಕ್ಕ, ಕನಕನ ಕೃಷ್ಣ, ಕತ್ತಿ ಪತ್ತಿ ಕಲ್ಯಾಣಪ್ಪೆ, ಪ್ರಚಂಡ ಪರಶುರಾಮ, ಸ್ವಾಮಿ ಶರಣಂ ಐಯ್ಯಪ್ಪೆ, ರಾಷ್ಟ್ರವೀರ ರಾಣಾಪ್ರತಾಪ, ಭೂತಾಳ ಪಾಂಡ್ಯೆ, ಮಿನಿಸ್ಟರ್ ಮುಂಡಪ್ಪಣ್ಣೆ, ಯಮೆ ತೆಲಿಪುವೆ, ಅಬ್ಬರದ ಆದಿಶಕ್ತಿ, ಕಾರ್ನಿಕದ ಕೋಟಿಚೆನ್ನಯೆ, ತುಳುನಾಡ ಸಿರಿ ನಾಗಬ್ರಹ್ಮೆ, ಮಹಾವೀರ ಮಾರುತಿ, ಪೊಣ್ಣ ಮನಸ್ ಬಂಗಾರ್, ಇತ್ಯಾದಿ ಸುಮಾರು ನೂರಕ್ಕೂ ಹೆಚ್ಚು ಕನ್ನಡ ಮತ್ತು ತುಳು ನಾಟಕಗಳನ್ನು ಬರೆದ ಅವರು ಪೊಲೀಸ್ ಪತ್ನಿ, ಕೆಂಪು ಹೆಣ್ಣು ಮುಂತಾದ ಕಾದಂಬರಿಯನ್ನೂ ಬರೆದಿದ್ದರು. ‘ಯೊಗಾದ್ ಎನ್ನ ಬದ್‍ಕ್, ಬಂಗಾರ್ ಪಟ್ಲೇರ್, ಮುಂತಾದ ಸಿನಿಮಾದಲ್ಲೂ ಬಣ್ಣ ಹಚ್ಚಿದ ಅವರಿಗೆ ಇತ್ತೀಚೆಗೆ ತುಳು ಸಾಹಿತ್ಯ ಅಕಾಡೆಮಿಯ ಜೀವಮಾನ ಸಾಧನೆಯ ಗೌರವ ಲಭಿಸಿತ್ತು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss