ಪಡುಬಿದ್ರಿ :- ಪಡುಬಿದ್ರಿ ರಾಗ್ ರಾಂಗ್ ಕಲ್ಚರಲ್ & ಸ್ಪೋರ್ಟ್ಸ್ ಕ್ಲಬ್ (ರಿ) ವತಿಯಿಂದ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜಾತ್ರ ಮಹೋತ್ಸವದ ಅಂಗವಾಗಿ 20 ನೇ ವರ್ಷದ ” ಸ್ಟಾರ್ ನೃೆಟ್” ಸಾಂಸ್ಕೃತಿಕ ಕಾರ್ಯಕ್ರಮವು ವಿಶ್ವಾಸ್ ವಿ.ಅಮೀನ್ ಸಾರಥ್ಯದಲ್ಲಿ ದೇವಸ್ಥಾನದ ವಠಾರದಲ್ಲಿ ಅದ್ದೂರಿ ವೇದಿಕೆಯಲ್ಲಿ ನಡೆಯಿತು
“ಸಾಂಸ್ಕೃತಿಕ ನಾಡು ನಮ್ಮ ತುಳುನಾಡಿನ ಊರ ಜಾತ್ರೆಯಲ್ಲಿ ವಿಭಿನ್ನವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಭಗವಂತನಿಗೆ ಸಮಾರ್ಪಿಸುವ ಒಳ್ಳೆಯ ಕಾರ್ಯವನ್ನು ಸಂಸ್ಥೆ ನಡೆಸುತ್ತಾ ಬರುತಿರುವುದು ಶ್ಲಾಘನೀಯ..”* ಎಂದು ಉದ್ಯಮಿ ಬೋಳ ಪ್ರಶಾಂತ್ ಕಾಮತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
”ಸಾಂಸ್ಕೃತಿಕ ಚಟುವಟಿಕೆ ಜೀವನದ ಅವಿಭಾಜ್ಯ ಅಂಗ..ದೇಶ ವಿದೇಶದ ಸಾಂಸ್ಕೃತಿಕ ವೃೆವಿಧ್ಯತೆಗಳು ಒಂದು ಸಾಂಸ್ಕೃತಿಕ ಬೆಳವಣಿಗೆಗೆ ದಾರಿಯಾಗಿದೆ..ನಿರಂತರವಾಗಿ 20 ವರ್ಷಗಳಿಂದ ವಿಭಿನ್ನ ರೀತಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಯೋಜಿಸಿರುವುದು ಹೆಮ್ಮೆಯ ವಿಷಯ ,ಯುವ ಜನತೆ ನಮ್ಮ ದೇಶದ ಸಂಸ್ಕೃತಿ ಮತ್ತು ಸಾಂಸ್ಕೃತಿಕ ವೃೆವಿಧ್ಯತೆಯನ್ನು ಬೆಳೆಸುವಲ್ಲಿ ತೂಡಗಿಸಿ ಕೊಳ್ಳಬೇಕೆಂದು ..” ಎಂದು ಮಾಜಿ ತಾ.ಪಂ.ಸದಸ್ಯ ನವೀನಚಂದ್ರ ಜೆ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು
ಈ ಸಂದರ್ಭದಲ್ಲಿ ಸಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಮಾಜಿ .ತಾ.ಪಂ.ಸದಸ್ಯರಾದ ನವೀನಚಂದ್ರ ಜೆ ಶೆಟ್ಟಿ ಹಾಗು ಉದ್ಯಮಿ ಬೋಳ ಪ್ರಶಾಂತ್ ಕಾಮತ್ ರವನ್ನು ಸನ್ಮಾನಿಸಲಾಯಿತು.. ಕೋದ್ರೂಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಪೂಜಾರಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪ ಸಮಿತಿ ಅಧ್ಯಕ್ಷ ಸುರೇಂದ್ರ ಶೆಟ್ಟಿ , ಕಾಂಚನ್ ಹುಂಡ್ಯೆ ಅಡಳಿತ ನಿರ್ದೇಶಕ ಪ್ರಸಾದ್ ಕಾಂಚನ್ ,
ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೃೆ, ಅದಾನಿ ಫೌಂಡೇಶನ್ ಅಧ್ಯಕ್ಷ ಕಿಶೋರ್ ಅಳ್ವ, ಸಂತೋಷ್ ಕುಮಾರ್ ಶೆಟ್ಟಿ ಪಲ್ಲವಿ , ಮಿಥನ್ ಹೆಗ್ಡೆ, ದಮಯಾಂತಿ ಅಮೀನ್ , ಶಿವಕುಮಾರ್ ಕರ್ಜೆ , ಸುಕುಮಾರ್ ಶೆಟ್ಟಿ , ನಟರಾಜ್ ಪಿ.ಎಸ್ ,
ದೀಪಕ್ ಎರ್ಮಾಳ್ , ರೊಪೇಶ್ ಕಲ್ಮಾಡಿ, ಗಣೇಶ್ ಅಚಾರ್ಯ ಉಚ್ಚಿಲ, ರಮೇಶ್ ಯು, ನವೀನ್ ಎನ್.ಶೆಟ್ಟಿ , ಅಶೋಕ್ ಸಾಲ್ಯಾನ್ , ರಚನ್ ಸಾಲ್ಯಾನ್ , ಸಂತೋಷ್ ಪಡುಬಿದ್ರಿ,
ಚಲನಚಿತ್ರ ನಟರಾದ ಪ್ರಥ್ವಿ ಅಂಬಾರ್ , ರಮೇಶ್ ರೃೆ ಕುಕ್ಕೆಹಳ್ಳಿ , ಬಹುಭಾಷಾ ನಟಿ ಚಿರಾಶ್ರಿ ಅಂಚನ್, ವನ್ಸಿಟಾ ಡಯಾಸ್ , ಗಿಚ್ಚಗಿಲಿ ಗಿಲಿ ರಿಯಾಲಿಟಿ ಖ್ಯಾತಿಯ ದಿಕ್ಷಾ ಬ್ರಹ್ಮಾವಾರ , ರೂಪದರ್ಶಿ ಸಿಂಚನಾ ಪ್ರಕಾಶ್ ಉಪಸ್ಥಿತರಿದ್ದರು..
ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ , ಬೆಳಪು ಗ್ರಾ.ಪಂ. ಅಧ್ಯಕ ದೇವಿಪ್ರಸಾದ್ ಶೆಟ್ಟಿ , ತೆಂಕ ನಿಡಿಯೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಯತೀಶ್ ಕರ್ಕೇರ , ಪ್ರಖ್ಯಾತ್ ಶೆಟ್ಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶುಭ ಹಾರೃೆಸಿದರು..
ಡ್ರೀಮ್ಸ್ ಗರ್ಲ್ಸ್ ನೃತ್ಯ ತಂಡದವರಿಂದ ”ನೃತ್ಯ ವೃೆಭವ” ಹಾಗು ಶಶಿ ಮ್ಯೂಸಿಕಲ್ ಪಡುಬಿದ್ರಿ ತಂಡದವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮವು ನಡೆಯಿತು.. ಸಂಸ್ಥೆಯ ಅಧ್ಯಕ್ಷ ವಿಶ್ವಾಸ್ ಅಮೀನ್ ಸ್ವಾಗತಿಸಿ.. ಸಂತೋಷ್ ನಂಬಿಯಾರ್ ವಂದಿಸಿ, ನಿರೂಪಿಸಿದರು.