ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಮೇ 10ರಂದು ಮತದಾನವು ನಡೆಯಲಿದ್ದು, ಮತದಾನ ಮಾಡಲು ಚುನಾವಣಾ ಗುರುತಿನ ಚೀಟಿ ಜೊತೆಗೆ ಪರ್ಯಾಯ ದಾಖಲೆಗಳನ್ನು ಬಳಸಬಹುದಾಗಿದೆ.ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ತಿಳಿಸಿದ್ದಾರೆ.
ಪರ್ಯಾಯ ದಾಖಲೆಗಳು: ಆಧಾರ್ ಕಾರ್ಡ್, ನರೇಗಾ ಜಾಬ್ ಕಾರ್ಡ್, ಬ್ಯಾಂಕ್ ಅಥವಾ ಅಂಚೆ ಕಚೇರಿಯಿಂದ ವಿತರಿಸಲಾದ ಭಾವಚಿತ್ರಹೊಂದಿರುವ ಪಾಸ್‌ಬುಕ್, ಕಾರ್ಮಿಕ ಸಚಿವಾಲಯದ ಯೋಜನೆಯಡಿಯಲ್ಲಿ ನೀಡಲಾದ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, ವಾಹನ ಚಾಲನಾ ಪರವಾನಗಿ ಪತ್ರ, ಪಾನ್ ಕಾರ್ಡ್, ಎನ್.ಪಿ.ಆರ್ ಅಡಿಯಲ್ಲಿ ಆರ್.ಜಿ.ಐ ನೀಡಿದ ಸ್ಮಾರ್ಟ್ ಕಾರ್ಡ್, ಭಾರತೀಯ ಪಾಸ್‌ಪೋರ್ಟ್, ಭಾವಚಿತ್ರಹೊಂದಿರುವ ಪಿಂಚಣಿ ದಾಖಲೆ, ಕೇಂದ್ರ/ ರಾಜ್ಯ ಸರ್ಕಾರ/ ಪಿಎಸ್‌ಯು/ಪಬ್ಲಿಕ್ ಲಿಮಿಟೆಡ್ ಕಂಪನಿಗಳು ಉದ್ಯೋಗಿಗಳಿಗೆ ನೀಡಿದ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು, ಎಂಪಿ, ಎಂಎಲ್‌ಎ ಹಾಗೂ ಎಂಎಲ್ಸಿಗಳಿಗೆ ನೀಡಲಾದ ಅಧಿಕೃತ ಗುರುತಿನ ಚೀಟಿಗಳು ಅಥವಾ ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಿಂದ ನೀಡುವ ಯುಡಿಐಡಿ ಕಾರ್ಡ್ ಬಳಸಿ ಮತಚಲಾಯಿಸಬಹುದು ಎಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
