ಬೆಂಗಳೂರು : ಪಿಎಸ್ ಐ ನೇಮಕಾತಿ ಹಗರಣ ಸಂಬಂಧ ಈಗಾಗಲೇ ಸಿಐಡಿ ತನಿಖೆ ನಡೆಸುತ್ತಿದ್ದು, ಈ ನಡುವೆ ನೊಂದ ಪಿಎಸ್ ಐ ಅಭ್ಯರ್ಥಿಗಳು ಪ್ರಧಾನಿ ನರೇಂದ್ರ ಮೋದಿಗೆ ರಕ್ತದಲ್ಲಿ ಬರೆದಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿರುವ ಅಭ್ಯರ್ಥಿಗಳು, ಪಿಎಸ್ ಐ ಪರೀಕ್ಷೆಯಲ್ಲಿ ಆಯ್ಕೆಯಾಗಿ ಮೋಸ ಹೋದವರಿಗೆ ನ್ಯಾಯ ಸಿಗಬೇಕು. ಅನ್ಯಾಯ ಮಾಡಿದವರನ್ನು ಜೈಲಿಗೆ ಹಾಕಿ. ಆದರೆ ನಿಯತ್ತಿನಿಂದ ಬರೆದವರಿಗೆ ಮೋಸ ಆಗಬಾರದು. ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳು ಹಣ ಇದ್ದವರಿಗೆ ಮಾತ್ರ ಎನ್ನುವಂತ ವ್ಯವಸ್ಥೆ ಬಂದುಬಿಟ್ಟಿದೆ. ಹೀಗಾಗಿ ಇನ್ಮುಂದೆ ನಾವುಉ ಸರ್ಕಾರಿ ಹುದ್ದೆ ಪರೀಕ್ಷೆಗಳನ್ನು ಬರೆಯುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ನಮಗೆ ಅಪಾರ ಗೌರವವಿದೆ. ತನಿಖೆ ಮಾಡಿ ನ್ಯಾಯ ಕೊಡಿಸುತ್ತಾರೆ ಎನ್ನುವ ನಂಬಿಕೆ ಇದೆ. ಒಂದು ವೇಳೆ ನ್ಯಾಯಕೊಡಿಸದಿದ್ದರೆ ನಾವು ಮುಂದೆ ಟೆರರಿಸ್ಟ್ ಗಳಿಗೆ ಕೈಜೋಡಿಸುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

