Saturday, June 25, 2022

SSLC ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಸೇವೆ ಕಲ್ಪಿಸಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಸಿಟಿ) ತಿಳಿಸಿದೆ. SSLC ಪೂರಕ...
More

  Latest Posts

  ಕುಂದಾಪುರ: ಪುರಾತನ ಕಾಲದ ಆನೆ ನೀರು ಕುಡಿಯುವ ಕೊಪ್ಪರಿಗೆ ಪತ್ತೆ

  ಕುಂದಾಪುರ: ಪುರಾತನ ಕಾಲದಲ್ಲಿ ಬಳಕೆಯಲ್ಲಿದ್ದ ಆನೆ ನೀರು ಕುಡಿಯುವ ಕೊಪ್ಪರಿಗೆ, ಆನೆ ಕಟ್ಟುವ ಕಲ್ಲಿನ ಕಂಬವೊಂದು ತಾಲೂಕಿನ ಹೊಸಂಗಡಿ ಪೇಟೆಯಲ್ಲಿ ನಿನ್ನೆ ಪತ್ತೆಯಾಗಿದೆ. ಶತವಸಂತಗಳಿಗೂ ಹಿಂದಿನ ಕಾಲದ ರಾಜರ, ಆನೆ...

  BIG NEWS: ಹಳ್ಳದಲ್ಲಿ ತೇಲಿ ಬಂದ 7 ನವಜಾತ ಶಿಶುಗಳ ಶವ; ಕಂಗಾಲಾದ ಗ್ರಾಮಸ್ಥರು

  ಬೆಳಗಾವಿ: ಹಳ್ಳದಲ್ಲಿ ತೇಲಿ ಬಂದ ಬೃಹತ್ ಡಬ್ಬಿಯಲ್ಲಿ 7 ನವಜಾತ ಶಿಶುಗಳ ಮೃತದೇಹ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂ ಕಿನಲ್ಲಿ ಬೆಳಕಿಗೆ ಬಂದಿದೆ. ಆಗತಾನೇ...

  ರಕ್ತ ಪರೀಕ್ಷೆಯ ಮೂಲಕ ʻಸ್ತನ ಕ್ಯಾನ್ಸರ್‌ʼ ಪತ್ತೆ: ಭಾರತದಲ್ಲೂ ಈ ತಂತ್ರಜ್ಞಾನ ಲಭ್ಯ

  ದೆಹಲಿ: ರಕ್ತ ಪರೀಕ್ಷೆ ಮೂಲಕ ಸ್ತನ ಕ್ಯಾನ್ಸರ್ ಅನ್ನು ಅದರ ಆರಂಭಿಕ ಹಂತದಲ್ಲೇ ಪತ್ತೆ ಮಾಡಬಹುದಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ತಂತ್ರಜ್ಞಾನ ಈಗ ಭಾರತದಲ್ಲೂ ಲಭ್ಯವಿದೆ.

  ಮಂಗಳೂರು: ಜುಲೈ 3ರಂದು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

  ಮಂಗಳೂರು: ಬಿಲ್ಲವ ಸಂಘ (ರಿ.) ಉರ್ವ -ಅಶೋಕನಗರ ವತಿಯಿಂದ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ,ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಜುಲೈ-3 ಆದಿತ್ಯವಾರದಂದು ಉರ್ವ ಬಿಲ್ಲವ ಸಂಘದ ನಾರಾಯಣ...

  ಉಳ್ಳಾಲ: ಪವಿತ್ರ ಹಜ್ ಯಾತ್ರೆಗೆ ಕಾಲ್ನಡಿಗೆಯಲ್ಲೇ ಹೊರಟ ಯುವಕ- ತಲಪಾಡಿಯಲ್ಲಿ ಸ್ವಾಗತ

  ಉಳ್ಳಾಲ: ಮಲಪ್ಪುರಂನಿಂದ ಸುಮಾರು 8,600ಕ್ಕೂ ಅಧಿಕ ಕಿ.ಮೀ. ದೂರದಲ್ಲಿರುವ ಪವಿತ್ರ ಮಕ್ಕಾವನ್ನು 9 ತಿಂಗಳ ಅವಧಿಯ ಕಾಲ್ನಡಿಗೆಯಲ್ಲೇ ಕ್ರಮಿಸಿ ಪವಿತ್ರ ಹಜ್ ಯಾತ್ರೆಗೆ ಹೊರಡಲು ಸಂಕಲ್ಪ ಮಾಡಿರುವ ಮುಸ್ಲಿಂ ಯುವಕ ಶಿಹಾಬ್ ಚೊಟ್ಟೂರ್ ನಿನ್ನೆ ತಲಪಾಡಿಯಲ್ಲಿ ಭವ್ಯ ಸ್ವಾಗತ ಕೋರಲಾಯಿತು.

  ಕೇರಳದ ಮಲಪ್ಪುರಂ ಜಿಲ್ಲೆಯ ಕನಿಪುರದಲ್ಲಿ ಸೂಪರ್ ಮಾರ್ಕೆಟ್ ನಡೆಸುತ್ತಿರುವ ಶಿಹಾಬ್ ಚೊಟ್ಟೂರ್ (30) ಹಜ್ ಯಾತ್ರೆಗೆ ಹೊರಟಿರುವ ಯುವಕ. ಇವರು ನಿನ್ನೆ ಸಂಜೆ 5.30ಕ್ಕೆ ತಲಪಾಡಿ ಗಡಿ ಮೂಲಕ ದ.ಕ.ಜಿಲ್ಲೆಗೆ ಪ್ರವೇಶಿಸಿದ್ದು, ನೂರಾರು ಮಂದಿ ಭವ್ಯ ಸ್ವಾಗತ ನೀಡಿದರು. ತಲಪಾಡಿ ಪ್ರವೇಶಿಸುತ್ತಲೇ ನೂರಾರು ಮಂದಿ ಬರಮಾಡಿಕೊಂಡರು.

  ಗುರುವಾರ ಮಧ್ಯಾಹ್ನ ಕೇರಳದ ಹೊಸಂಗಡಿಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡ ಶಿಹಾಬ್ ಕೆಲವು ಹೊತ್ತು ವಿಶ್ರಾಂತಿ ಪಡೆದು ಬಳಿಕ ಯಾತ್ರೆ ಮುಂದುವರಿಸಿದರು. ಕೋಟೆಕಾರ್ ಸಮೀಪದ ಬೀರಿಯ ಮಸೀದಿಯಲ್ಲಿ ಮಗ್ರಿಬ್ ನಮಾಝ್ ನಿರ್ವಹಿಸಿದ ಶಿಹಾಬ್ ಅವರಿಗೆ ಸಾರ್ವಜನಿಕರು ಶುಭಕೋರಿದರು.

  ಈ ಸಂದರ್ಭದಲ್ಲಿ ಭಾರೀ ಜನಜಂಗುಳಿ, ನೂಕು ನುಗ್ಗಲು ಉಂಟಾಗಿ ಶಿಹಾಬ್ ಅವರಿಗೆ ಸಾವಧಾನವಾಗಿ ನಡೆಯುವುದೇ ಕಷ್ಟವಾಯಿತು. ತಲಪಾಡಿಯಿಂದ ಬೀರಿವರೆಗೂ ಅವರನ್ನು ಸುತ್ತುವರೆದು ಹಿಂಬಾಲಿಸಿಕೊಂಡು ಬಂದ ಜನರ ಅತ್ಯುತ್ಸಾಹ ನೂಕಾಟ, ತಳ್ಳಾಟಕ್ಕೂ ಕಾರಣವಾಯಿತು. ಕೇರಳದ ಎಂಟು ದಿನಗಳಲ್ಲೂ ಶಿಹಾಬ್ ಜೊತೆ ಜನಜಂಗುಳಿಯೇ ಸೇರಿತ್ತು. ಸುರಿಯುವ ಮಳೆಗೆ ಕೊಡೆ ಹಿಡಿಯಲು ಸಾವಿರಾರು ಮಂದಿ ಸಾಥ್ ನೀಡುತ್ತಿದ್ದರು. ಪಾದಯಾತ್ರೆ ಮೂಲಕ ಹಜ್ ಯಾತ್ರೆಗೆ ಹೊರಡಬೇಕೆಂದು ಸುಮಾರು 8 ತಿಂಗಳಿಂದ ಸಿದ್ಧತೆ ಮಾಡಿಕೊಂಡ ಶಿಹಾಬ್‌ಗೆ ವಿದೇಶಾಂಗ ವ್ಯವಹಾರ ಸಚಿವಾಲಯದಿಂದ ಎಲ್ಲ ಅನುಮತಿ ಪಡೆದುಕೊಳ್ಳಲು ಕೇಂದ್ರ ಸಚಿವ ವಿ. ಮುರುಳೀಧರನ್ ಸಹಿತ ಹಲವರು ನೆರವಾಗಿದ್ದಾರೆ.

  ಕೇರಳ, ಕರ್ನಾಟಕ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ತಾನ್, ಹರಿಯಾಣ, ಪಂಜಾಬ್, ವಾಘಾ ಗಡಿ ಮೂಲಕ ಪಾಕಿಸ್ತಾನ, ಇರಾಕ್, ಇರಾನ್, ಕುವೈಟ್ ಮತ್ತು ಸೌದಿ ಅರೇಬಿಯಾ ತೆರಳುವ ಅವರು, ಆಯಾ ವಿವಿಧ ದೇಶಗಳ ಗಡಿ ದಾಟಲು ವೀಸಾ ಹಾಗೂ ರಾಯಭಾರ ಕಚೇರಿಗಳಿಂದ ಅನುಮತಿ ಪತ್ರಗಳನ್ನು ಪಡೆದುಕೊಂಡಿದ್ದಾರೆ. ಈ ಯಾತ್ರೆ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ ಶಿಹಾಬ್ ‘ಒಟ್ಟು 8640ಕಿ,ಮೀ ಹಾದಿಯನ್ನು 280 ದಿನಗಳಲ್ಲಿ ತಲುಪುವುದು ನನ್ನ ಗುರಿ. ಪ್ರತಿದಿನ 25ಕಿ.ಮೀ ನಡೆಯುತ್ತಿದ್ದೇನೆ. ಒಂಭತ್ತು ತಿಂಗಳು 10 ದಿನಕ್ಕಿಂತ ಹೆಚ್ಚಿನ ದಿನದ ಪ್ರಯಾಣದ ಬಳಿಕ ಸೌದಿ ಅರೇಬಿಯಾ ತಲುಪಿ, 2023ನೇ ಸಾಲಿನ ಹಜ್‌ಗೆ ಅರ್ಜಿ ಹಾಕಿ ಹಜ್ ಪ್ರಕ್ರಿಯೆ ನಡೆಸುವುದು ನನ್ನ ಉದ್ದೇಶ. ಇದಕ್ಕೆ ನನ್ನ ಕುಟುಂಬ, ಗೆಳೆಯರ ಸಹಕಾರವಿದೆ’ ಎಂದು ಹೇಳಿದ್ದಾರೆ.

  ತನ್ನ ಜೊತೆ 10 ಕೆ.ಜಿ ತೂಕದ ಬ್ಯಾಗ್‌ ಒಂದಿದೆ. ಅದರಲ್ಲಿ ಮಲಗಲು ಹಾಸುವ ಬಟ್ಟೆ, ನಾಲ್ಕು ಟೀ ಶರ್ಟ್ಸ್ ಮತ್ತು ಪ್ಯಾಂಟ್‌ಗಳು, ಕೈಯಲ್ಲೊಂದು ಉದ್ದದ ಕೊಡೆ ಇದೆ. ದಾರಿ ಮಧ್ಯೆ ರಾತ್ರಿ ಮಸೀದಿಗಳಲ್ಲಿ ತಂಗುತ್ತಿದ್ದಾರೆ. ಜನರು ಅವರಿಗೆ ಅನ್ನಾಹಾರ ಕೊಟ್ಟು ಸತ್ಕರಿಸಿ ಬೀಳ್ಕೊಡುತ್ತಿದ್ದಾರೆ. ನಿನ್ನೆ ಇವರು ನಗರದ ಕೋಟೆಕಾರ್ ಬೀರಿಯ ಹನಫಿ ಮಸ್ಜಿದ್‌ನಲ್ಲೇ ರಾತ್ರಿ ತಂಗಿದರು. ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ.ಅಶ್ರಫ್, ರಾಜ್ಯ ಹಜ್ ಕಮಿಟಿಯ ಮಾಜಿ ಸದಸ್ಯ ಕೆ.ಎಂ. ಅಬೂಬಕರ್ ಸಿದ್ದೀಕ್ ಮೋಂಟುಗೋಳಿ ಮತ್ತಿತ್ತರರು ಶಿಹಾಬ್ ಅವರನ್ನು ಗಡಿಪ್ರದೇಶದಲ್ಲಿ ಬರ ಮಾಡಿಕೊಂಡರು.

  Latest Posts

  ಕುಂದಾಪುರ: ಪುರಾತನ ಕಾಲದ ಆನೆ ನೀರು ಕುಡಿಯುವ ಕೊಪ್ಪರಿಗೆ ಪತ್ತೆ

  ಕುಂದಾಪುರ: ಪುರಾತನ ಕಾಲದಲ್ಲಿ ಬಳಕೆಯಲ್ಲಿದ್ದ ಆನೆ ನೀರು ಕುಡಿಯುವ ಕೊಪ್ಪರಿಗೆ, ಆನೆ ಕಟ್ಟುವ ಕಲ್ಲಿನ ಕಂಬವೊಂದು ತಾಲೂಕಿನ ಹೊಸಂಗಡಿ ಪೇಟೆಯಲ್ಲಿ ನಿನ್ನೆ ಪತ್ತೆಯಾಗಿದೆ. ಶತವಸಂತಗಳಿಗೂ ಹಿಂದಿನ ಕಾಲದ ರಾಜರ, ಆನೆ...

  BIG NEWS: ಹಳ್ಳದಲ್ಲಿ ತೇಲಿ ಬಂದ 7 ನವಜಾತ ಶಿಶುಗಳ ಶವ; ಕಂಗಾಲಾದ ಗ್ರಾಮಸ್ಥರು

  ಬೆಳಗಾವಿ: ಹಳ್ಳದಲ್ಲಿ ತೇಲಿ ಬಂದ ಬೃಹತ್ ಡಬ್ಬಿಯಲ್ಲಿ 7 ನವಜಾತ ಶಿಶುಗಳ ಮೃತದೇಹ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂ ಕಿನಲ್ಲಿ ಬೆಳಕಿಗೆ ಬಂದಿದೆ. ಆಗತಾನೇ...

  ರಕ್ತ ಪರೀಕ್ಷೆಯ ಮೂಲಕ ʻಸ್ತನ ಕ್ಯಾನ್ಸರ್‌ʼ ಪತ್ತೆ: ಭಾರತದಲ್ಲೂ ಈ ತಂತ್ರಜ್ಞಾನ ಲಭ್ಯ

  ದೆಹಲಿ: ರಕ್ತ ಪರೀಕ್ಷೆ ಮೂಲಕ ಸ್ತನ ಕ್ಯಾನ್ಸರ್ ಅನ್ನು ಅದರ ಆರಂಭಿಕ ಹಂತದಲ್ಲೇ ಪತ್ತೆ ಮಾಡಬಹುದಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ತಂತ್ರಜ್ಞಾನ ಈಗ ಭಾರತದಲ್ಲೂ ಲಭ್ಯವಿದೆ.

  ಮಂಗಳೂರು: ಜುಲೈ 3ರಂದು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

  ಮಂಗಳೂರು: ಬಿಲ್ಲವ ಸಂಘ (ರಿ.) ಉರ್ವ -ಅಶೋಕನಗರ ವತಿಯಿಂದ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ,ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಜುಲೈ-3 ಆದಿತ್ಯವಾರದಂದು ಉರ್ವ ಬಿಲ್ಲವ ಸಂಘದ ನಾರಾಯಣ...

  Don't Miss

  `ಹಿಜಾಬ್’ ವಿವಾದ : ಕಾಲೇಜಿನಿಂದ ವರ್ಗಾವಣೆ ಪ್ರಮಾಣಪತ್ರ ಕೋರಿದ ಐವರು ವಿದ್ಯಾರ್ಥಿನಿಯರು!

  ಮಂಗಳೂರು : ರಾಜ್ಯದಲ್ಲಿ ಹಿಜಾಬ್ ವಿವಾದ ಮತ್ತೆ ಶುರುವಾಗಿದ್ದು, ಹಿಜಾಬ್ ಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಮತ್ತೆ ಐವರು ವಿದ್ಯಾರ್ಥಿನಿಯರು ವರ್ಗಾವಣೆಗಾಗಿ ಅರ್ಜಿ ಸಲ್ಲಿಸಿದ್ದಾರೆ. ಹಂಪನಕಟ್ಟೆ...

  ಕಾರ್ಕಳ: ಜೀಪ್ ಪಲ್ಟಿ- ಯುವತಿ ಮೃತ್ಯು, ಮೂವರಿಗೆ ಗಂಭೀರ ಗಾಯ

  ಕಾರ್ಕಳ : ಬೆಳ್ಮಣ್‌ನ ಮುಂಡ್ಕೂರು ಸಮೀಪದ ಸಂಕಲಕರಿಯ ಎಂಬಲ್ಲಿ ಜೀಪು ಪಲ್ಟಿಯಾದ ಪರಿಣಾಮ ಯುವತಿಯೊಬ್ಬರು ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತರನ್ನು...

  ಕರ್ನಾಟಕಕ್ಕೆ ಹೋಗುತ್ತಿದ್ದೇನೆ; ಕನ್ನಡದಲ್ಲಿಯೇ ಟ್ವೀಟ್ ಮಾಡಿ ತಿಳಿಸಿದ ಪ್ರಧಾನಿ ಮೋದಿ

  ನವದೆಹಲಿ: ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ. ಅಲ್ಲಿ ಬೆಂಗಳೂರು ಮತ್ತು ಮೈಸೂರಿನ ಕಾರ್ಯಕ್ರಮಗಳಲ್ಲಿ ಭಾಗವಹಿಸುವೆ ಎಂದು ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿ ಟ್ವೀಟ್ ಮಾಡಿ, ಕಾರ್ಯಕ್ರಮಗಳ ವಿವರವನ್ನು ತಿಳಿಸಿದ್ದಾರೆ. ಮೊದಲು ಬೆಂಗಳೂರಿನ ಮಿದುಳು...

  ಮಂಗಳೂರು – ಮುಂಬಯಿ: ಇಂಡಿಗೋ ವಿಮಾನಯಾನ ಆರಂಭ

  ಮಂಗಳೂರು: ಮಂಗಳೂರು – ಮುಂಬಯಿ ನಡುವೆ ಇಂಡಿಗೋ ವಿಮಾನದ ದೈನಂದಿನ ಸಂಚಾರ ರವಿವಾರ ಆರಂಭಗೊಂಡಿದೆ. ಇಂಡಿಗೋದ ಏರ್‌ಬಸ್‌ ಎ320 ವಿಮಾನ ಪ್ರತಿದಿನ ಬೆಳಗ್ಗೆ 8.50ಕ್ಕೆ ಮುಂಬಯಿಯಿಂದ ಹೊರಟು...

  ಉಡುಪಿ: ಕಡಿಯಾಳಿ ದೇವಸ್ಥಾನದ ತಿರುಗುವ ಮುಚ್ಚಿಗೆಗೆ ಅಮಿತಾಬ್ ಬಚ್ಚನ್ ಮೆಚ್ಚುಗೆ

  ಉಡುಪಿ: ಕಡಿಯಾಳಿ ದೇವಸ್ಥಾನದ ತಿರುಗುವ ಮುಚ್ಚಿಗೆಗೆ ಅಮಿತಾಬ್ ಬಚ್ಚನ್ ಮೆಚ್ಚುಗೆಉಡುಪಿ: ದೇಶಾದ್ಯಂತ ಮೆಚ್ಚುಗೆ ಗಳಿಸಿದ ಕಡಿಯಾಳಿ ದೇವಳದ ತಿರುಗುವ ಮುಚ್ಚಿಗೆ ಮತ್ತು ತಾಯಿ ಮಹಿಷಮರ್ದಿನಿಯ ಚಿತ್ರವನ್ನು ಬಿಗ್ ಬಿ ಖ್ಯಾತಿಯ...