Friday, April 19, 2024
spot_img
More

    Latest Posts

    ಅಪಘಾತದಲ್ಲಿ ಮೃತಪಟ್ಟ ಅಣ್ಣನ ಮೃತದೇಹ ನೋಡಿ ತಂಗಿ ಸಾವು

    ಮೈಸೂರು : ಅಪಘಾತದಲ್ಲಿ ಮೃತಪಟ್ಟ ಅಣ್ಣನ ಮೃತದೇಹ ನೋಡಿ ತಂಗಿ ಆಘಾತಕ್ಕೊಳಗಾಗಿ ಸಾವನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಡೆದಿದೆ.

    ಹುಣಸೂರು ತಾಲೂಕಿನ ಸೋಮನಹಳ್ಳಿ ಗೇಟ್ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಕೀರ್ತಿ ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದ. ಹಾಗೂ ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದವು. ಇಂದು ಕೀರ್ತಿ ಅಂತ್ಯ ಸಂಸ್ಕಾರಕ್ಕೆ‌ ಬಂದಿದ್ದ ದೊಡ್ಡಪ್ಪನ ಮಗಳು ರಶ್ಮಿ ಅಣ್ಣನ ಮೃತ ದೇಹ ನೋಡಿ ಆಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾಳೆ.

    ತಕ್ಷಣ ರಶ್ಮಿಯನ್ನು ಹುಣಸೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ರಶ್ಮಿ ಪ್ರಾಣಬಿಟ್ಟಿದ್ದಾಳೆ. ಹುಣಸೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss