ಸುಳ್ಯ : ಜಾಲ್ಸೂರು-ಕಾಸರಗೋಡು ಅಂತರ್ ರಾಜ್ಯ ರಸ್ತೆಯಲ್ಲಿ ಕಾಡಾನೆಯೊಂದು ಬೆಳ್ಳಂಬೆಳಗ್ಗೆ ಪ್ರತ್ಯಕ್ಷವಾಗಿದ್ದು, ಎದುರಿನಿಂದ ಬಂದ ಬೈಕ್ ಸವಾರರು ಕೂದಳೆಲೆ ಅಂತರದಿಂದ ಕಾಡಾನೆ ದಾಳಿಯಿಂದ ಪಾರಾಗಿದ್ದಾರೆ. ಕಾಸರಗೋಡು ಜಿಲ್ಲೆಯ ದೇಲಂಪಾಡಿ ಗ್ರಾಮದ ಬೆಳ್ಳಿಪಾಡಿ ಪರಿಸರದಲ್ಲಿ ಹಲವು ದಿನಗಳಿಂದ ನಿರಂತರವಾಗಿ ಕಾಡಾನೆಗಳು ಕೃಷಿಕರ ತೋಟಗಳಿಗೆ ಹಾನಿ ಮಾಡುತ್ತಿದ್ದು, ಕಾಡಾನೆಯೊಂದು ಪಂಜಿಕಲ್ಲಿನ ಬಳಿ ಮುಖ್ಯ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಪ್ರತ್ಯಕ್ಷಗೊಂಡಿದೆ. ಇದರಿಂದ ಬೈಕ್ ಸವಾರರು ಗಲಿಬಿಲಿಕೊಂಡಿದ್ದು ಕಾಡಾನೆ ದಾಳಿಯಿಂದ ಪವಾಡ ಸದೃಶ ಪಾರಾಗಿದ್ದಾರೆ.
©2021 Tulunada Surya | Developed by CuriousLabs