Saturday, July 27, 2024
spot_img
More

    Latest Posts

    ಕಡಬ: ಕಾಡಾನೆ ದಾಳಿ-ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

    ಕಡಬ: ತಿಂಗಳ ಹಿಂದೆ ಕಡಬ ತಾಲೂಕಿನ ಐತ್ತೂರು ಸಮೀಪ ಕಾಡಾನೆ ತುಳಿತ್ತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಗೇರ್ತಿಲ ನಿವಾಸಿ ಚೋಮ ಅವರು ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 7ರಂದು ಮೃತಪಟ್ಟಿದ್ದಾರೆ. ಮರ್ದಾಳದಿಂದ ತನ್ನ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಐತ್ತೂರು ಕೊಣಾಜೆ ರಸ್ತೆಯಲ್ಲಿ ಕಾಡಾನೆ ದಾಳಿ ನಡೆಸಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೆಲ ದಿನಗಳ ಹಿಂದೆ ಅವರನ್ನು ಮನೆಗೆ ತರಲಾಗಿತ್ತು. ಚೋಮ ಅವರು ಇಂದು ಬೆಳಗ್ಗಿನ ಜಾವ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss