ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕನಕಮಜಲು ಮೂಲದ ಮಹಿಳೆಯೋರ್ವರು ಬೆಂಗಳೂರಿನಲ್ಲಿ ಸಾವಿಗೆ ಶರಣಾಗಿದ್ದಾರೆ. ಉಬರಡ್ಕ ಮಿತ್ತೂರು ಗ್ರಾಮದ ಮದುವೆಗದ್ದೆ ಸುಬ್ರಹ್ಮಣ್ಯ ಗೌಡ ಹಾಗೂ ಶ್ರೀಮತಿ ಉಷಾ ದಂಪತಿಯ ಪುತ್ರಿ ಶ್ರೀಮತಿ ಐಶ್ವರ್ಯ(23) ಅವರು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಐಶ್ವರ್ಯ ಅವರನ್ನು ಕೆಲವು ವರ್ಷದ ಹಿಂದೆ ಕನಕಮಜಲು ಗ್ರಾಮದ, ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಗಿರಿಯಪ್ಪ ಗೌಡ ಅವರ ಪುತ್ರ ರಾಜೇಶ್ ಅವರಿಗೆ ಮದುವೆ ಮಾಡಿ ಕೊಡಲಾಗಿತ್ತು. ಖಾಸಗಿ ಕಂಪೆನಿಯಲ್ಲಿ ಕೆಲಸಕಿದ್ದ ಐಶ್ವರ್ಯ ಮನೆಯಲ್ಲಿ ಯಾರು ಇಲ್ಲದ ಸಮಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರು ತಂದೆ ಸುಬ್ರಹ್ಮಣ್ಯ ಗೌಡ ಮದುವೆ ಗದ್ದೆ, ತಾಯಿ ಶ್ರೀಮತಿ ಉಷಾ, ಪತಿ ರಾಜೇಶ್ ಕಾಪಿಲ, ಸಹೋದರ ಸೂರ್ಯ, ಮಾವ ಗಿರಿಯಪ್ಪ ಗೌಡ ಕಾಪಿಲ ಸೇರಿದಂತೆ ಕುಟುಂಬಸ್ಥರನ್ನು ಅಗಲಿದ್ದಾರೆ. ಐಶ್ವರ್ಯ ಅವರ ಮೃತದೇಹ ಸುಳ್ಯಕ್ಕೆ ಬರಲಿದ್ದು, ಕನಕಮಜಲಿನಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ತಿಳಿದುಬಂದಿದೆ.
©2021 Tulunada Surya | Developed by CuriousLabs