Tuesday, April 23, 2024
spot_img
More

    Latest Posts

    ಪುತ್ತೂರು: ಮಹಿಳೆಯ ಮೇಲೆ ಅತ್ಯಾಚಾರ : ವೀಡಿಯೋ ಮಾಡಿ ಮಹಿಳೆಯ ಪತಿಗೆ ಕಳುಹಿಸಿದ ಆರೋಪಿ

    ಪುತ್ತೂರು: ಕೋಳಿ ಫಾರ್ಮ್‌ನಲ್ಲಿ ಕೆಲಸಕ್ಕಿದ್ದ ಮಹಿಳೆಯ ಮೇಲೆ ಫಾರ್ಮಿನ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ವ್ಯಕ್ತಿಯೋರ್ವ ಅತ್ಯಾಚಾರಗೈದಿದ್ದಲ್ಲದೆ ವಿಡಿಯೋ ಚಿತ್ರೀಕರಿಸಿ ಬೆದರಿಕೆಯೊಡ್ಡಿರುವ ಬಗ್ಗೆ ಸಂಪ್ಯ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ.

    ಠಾಣಾ ವ್ಯಾಪ್ತಿಯ ಅರಿಯಡ್ಕ ಗ್ರಾಮದ ಮಡ್ಯಂಗಳ ಎಂಬಲ್ಲಿರುವ ಕೋಳಿ ಫಾರ್ಮ್‌ವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉಮ್ಮರ್ ಎಂಬಾತ ಅಲ್ಲೇ ಕೆಲಸಕ್ಕೆ ಬರುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರಗೈದ ಬಳಿಕ ವಿಡಿಯೋ ಚಿತ್ರಿಕರಿಸಿ ಮಹಿಳೆಯ ಪತಿಗೆ ಕಳುಹಿಸಿದ್ದಾನೆ ಎನ್ನಲಾಗಿದೆ. ಮೇ 5 ರಂದು ಕೃತ್ಯ ನಡೆದಿದ್ದು, ಆರೋಪಿಯು ಜೀವ ಬೆದರಿಕೆ ಹಾಕಿದ್ದ ಕಾರಣ ಮಂಗಳವಾರದಂದು ಮಹಿಳೆಯು ಠಾಣೆಗೆ ದೂರು ನೀಡಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss