ಉಡುಪಿ ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಕಚೇರಿಗೆ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಮುಖಂಡರು ಆ.16 ರಂದು ಭೇಟಿ ನೀಡಿ ಜನರಿಗೆ ಕಲುಷಿತ ಆಹಾರ ಬದಲಿಗೆ ಉತ್ತಮ ಗುಣಮಟ್ಟದ ಆಹಾರ ದೊರಕುವಂತಾಗಲು ಕ್ರಮ ಕೈಗೊಳ್ಳಲು ಮನವಿ ಸಲ್ಲಿಸಿದರು.
ಆಹಾರದ ರಕ್ಷಣೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಅಕ್ಟೋಬರ್ 16 ರಂದು ವಿಶ್ವ ಆಹಾರ
ದಿನ ಎಂದು ಆಚರಿಸಿ ಜನರಲ್ಲಿ ನಾವು ತಿನ್ನುವ ಆಹಾರದ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ನಡೆಸಲಾಗುತ್ತದೆ.
ಒಬ್ಬ ವ್ಯಕ್ತಿಯ “ದೈಹಿಕ, ಮಾನಸಿಕ, ಬೌದ್ಧಿಕ ಹಾಗೂ ಸರ್ವತೋಮುಖ ಬೆಳವಣಿಗೆಗೆ ಸಮತೋಲಿತ,ಸುರಕ್ಷಿತ ಆಹಾರ ಅತೀ ಅಗತ್ಯ. ಬಹುತೇಕ ರೋಗಗಳನ್ನು ನಮ್ಮ ಜೀವನ ಶೈಲಿ ಮತ್ತು ಆಹಾರ ಪದ್ಧತಿಗಳನ್ನು ಸರಿಪಡಿಸಿ ಪ್ರಾರಂಭಿಕ ಹಂತದಲ್ಲಿಯೇ ತಡೆಯಬಹುದು. ಉತ್ತಮ ದೈಹಿಕ ವ್ಯಾಯಾಮ ಮತ್ತು ವಿಟಮಿನ್, ಪ್ರೋಟಿನ್, ಲವಣಾಂಶ, ಪೋಷಕಾಂಶ, ಶರ್ಕದ ಪಿಷ್ಠ ಮತ್ತು ನಾರುಯುಕ್ತ ಸಮತೋಲಿತ ಆಹಾರದಿಂದ ನೂರು ಕಾಲ ಆರೋಗ್ಯವಂತರಾಗಿ
ಬಾಳಬಹುದು ಎಂದು ಎಲ್ಲರಿಗೂ ತಿಳಿದ ವಿಚಾರವಾಗಿದೆ.
ಬಡ ಮತ್ತು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಸುರಕ್ಷಿತ ಆಹಾರದ ಕೊರತೆಯಿಂದಾಗಿ ಪ್ರತಿವರ್ಷ
ಎರಡರಿಂದ ಮೂರು ಜನರು ಸಾವಿಗೀಡಾಗುತ್ತಿದ್ದಾರೆ. ವಿಷಕಾರಕ ವಿಷಾಣುಗಳು ಮತ್ತು
ಕ್ಯಾನ್ಸರಾರಕ ರಾಸಾಯನಿಕಗಳ ಜೊತೆಗೆ ರೋಗಕಾರಕ ಬ್ಯಾಕ್ಟಿರಿಯಾಗಳು, ರೋಗಾಣುಗಳು ಮತ್ತು
ಪರಾವಲಂಬಿ ಜೀವಾಣುಗಳು ಸೇರಿಕೊಂಡು ಆಹಾರದ ಮುಖಾಂತರ ದೇಹಕ್ಕೆ ಸೇರಿ ಹೊಟ್ಟೆನೋವು, ವಾಂತಿ,
ಬೇದಿ, ಅತಿಸಾರದಂತಹ ಸಾಮಾನ್ಯರೋಗಳಿಂದ ಹಿಡಿದು ಕ್ಯಾನ್ಸರ್ ಹೃದಯ ಕಾಯಿಲೆಯಂತಹ ಗಂಭೀರವಾದ
ಖಾಯಿಲೆಗಳಿಗೆ ನಾಂದಿ ಹಾಡುತ್ತಿದೆ ಎಂದರೂ ತಪ್ಪಲ್ಲ.
ಆದುದರಿಂದ ಉಡುಪಿ ಜಿಲ್ಲೆಯಲ್ಲಿ ಕೂಡ ಹಲವಾರು ತಿಂಡಿ, ತಿನಿಸುಗಳು, ವಿವಿಧ ಆಹಾರ ತಯಾರಿಕೆ ಕೇಂದ್ರಗಳಿದ್ದು ಹೆಚ್ಚಿನ ಆಹಾರ ತಯಾರಿಕೆ ಕೇಂದ್ರಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿರ್ವಹಣಾ ವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ನಮ್ಮ ಸಂಘಟನೆಗೆ ದೂರುಗಳು ಬರುತ್ತಿದೆ. ದೂರ ಹೆಚ್ಚು ಹೆಚ್ಚು ಬಂದಲ್ಲಿ ಅಂತಹ ಕೇಂದ್ರಗಳ ವಿರುದ್ಧ ಮುಂದಿನ ದಿನಗಳಲ್ಲಿ ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಅದ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ನೇತೃತ್ವದಲ್ಲಿ ಹೋರಾಟ ನಡೆಸಲು ತೀರ್ಮಾನ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ. ಆದುದರಿಂದ
ತಾವು ತಮ್ಮ ವ್ಯಾಪ್ತಿಯಲ್ಲಿ ಬರುವ ಆಹಾರ ತಯಾರಿಕೆ ಕೇಂದ್ರಗಳು ಶುಧ್ಧ ನೀರು ಉಪಯೋಗಿಸುವ ಮತ್ತು ಆಹಾರ ತಯಾರಿಕೆ ಕಾರ್ಮಿಕರು ಆರೋಗ್ಯ ಫಿಟ್ ನೆಸ್ ಪ್ರಮಾಣ ಪಡೆದಿರುವ, ಸೇರಿದಂತೆ ವಿವಿಧ ಆಹಾರ ತಯಾರಿಕೆ ನಿಯಮಗಳನ್ನು ಪಾಲಿಸಿಕೊಂಡು ಬರುತ್ತಿದ್ದಾರೆಯೇ ? ಎಂದು ಕಾಲ ಕಾಲಕ್ಕೆ ಪರಿಶೀಲನೆ ನಡೆಸಬೇಕು ವಿಶ್ವದ ಎಲ್ಲಾ ಕಡೆಗಳಲ್ಲಿ ಆಹಾರ ಸುರಕ್ಷತೆ ಜಾಗ್ರತೆ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದರೂ ಉಡುಪಿ ಜಿಲ್ಲೆಯಲ್ಲಿ ಯಾವುದೇ ಕಾರ್ಯಕ್ರಮ ನಡೆಯದಿರುವ ಬೇಸರ ವ್ಯಕ್ತ ಪಡಿಸಿ ಮನವಿ ಸಲ್ಲಿಸಿ ಕ್ರಮ ಕೈಗೊಳ್ಳಲು ಒತ್ತಾಯಿಸಿದರು. ತುಳುನಾಡ ರಕ್ಷಣಾ ವೇದಿಕೆ ಜಿಲ್ಲಾ ವೀಕ್ಷಕರಾದ ಫ್ರ್ಯಾಂಕಿ ಡಿಸೋಜ, ಉಡುಪಿ ತಾಲೂಕು ಘಟಕ ಅಧ್ಯಕ್ಷರಾದ ಕೃಷ್ಣಕುಮಾರ್, ಉಡುಪಿ ತಾಲೂಕು ಮಹಿಳಾ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿ ಮತ್ತಿತರರು ಉಪಸ್ಥಿತರಿದ್ದರು.