ಮಂಗಳೂರು: ವಿಶ್ವ ಬಂಟ ಪ್ರತಿಷ್ಠಾನವು ಡಾ.ಡಿ.ಕೆ. ಚೌಟ ದತ್ತಿನಿಧಿಯಿಂದ ನೀಡುವ ಯಕ್ಷಗಾನ ಪ್ರಶಸ್ತಿಗೆ 2025ನೇ ಸಾಲಿನಲ್ಲಿ ತೆಂಕು ತಿಟ್ಟು ಯಕ್ಷಗಾನದ ಹೆಸರಾಂತ ಸ್ತ್ರೀವೇಷಧಾರಿ ಸಂಜಯ ಕುಮಾರ್ ಶೆಟ್ಟಿ ಗೋಣಿಬೀಡು ಆಯ್ಕೆಯಾಗಿದ್ದಾರೆ. ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಮಾಜಿ ಸದಸ್ಯ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಮತ್ತು ಬಡಗು ತಿಟ್ಟಿನ ಪಂಚ ಮೇಳಗಳ ಸಂಚಾಲಕ ಪಳ್ಳಿ ಕಿಶನ್ ಹೆಗ್ಡೆ ಅವರನ್ನೊಳಗೊಂಡ ಸಲಹಾ ಸಮಿತಿಯು ಈ ಪ್ರಶಸ್ತಿಗೆ ಅವರ ಹೆಸರನ್ನು ಶಿಫಾರಸು ಮಾಡಿದೆ. ಪ್ರಶಸ್ತಿಯು ರೂ.25,000/- ನಗದು ಹಾಗೂ ಪ್ರಮಾಣ ಫಲಕವನ್ನೊಳಗೊಂಡಿದೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಸಿಎ ವೈ.ಸುಧೀರ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.






ಆ.23 – ಪ್ರಶಸ್ತಿ ಪ್ರದಾನ:
ಇದೇ ಆಗಸ್ಟ್ 23ರಂದು ಭಾನುವಾರ ಮಂಗಳೂರಿನ ಕರಂಗಲಪಾಡಿ ಎ.ಜೆ.ಗ್ರ್ಯಾಂಡ್ ಹೋಟೆಲ್ನಲ್ಲಿ ನಡೆಯುವ ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ನ 29ನೇ ವಾರ್ಷಿಕ ಮಹಾಸಭೆಯಲ್ಲಿ ಟ್ರಸ್ಟ್ ಅಧ್ಯಕ್ಷ ಡಾ.ಎ.ಜೆ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

