Friday, March 31, 2023

BREAKING NEWS: ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡುವ ದಿನಾಂಕ ಜೂನ್ 30 ರವರೆಗೆ ವಿಸ್ತರಣೆ

ನವದೆಹಲಿ: ಶಾಶ್ವತ ಖಾತೆ ಸಂಖ್ಯೆ (PAN) ಕಾರ್ಡ್ ಮತ್ತು ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಲು ಗಡುವನ್ನು ಜೂನ್ 30, 2023 ರವರೆಗೆ ವಿಸ್ತರಿಸಲಾಗಿದೆ. ಮಂಗಳವಾರದ ಅಧಿಸೂಚನೆಯಲ್ಲಿ ಹಣಕಾಸು ಸಚಿವಾಲಯವು...
More

    Latest Posts

    ಕಡಬ: ವಾಟ್ಸಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾದ ಯುವಕ

    ಕಡಬ: ವಾಟ್ಸಪ್ ನಲ್ಲಿ ಸಾಯುವ ಕುರಿತ ಸ್ಟೇಟಸ್ ಹಾಕಿ ಯುವಕನೊರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ನಡೆದಿದೆ.

    ನಾಪತ್ತೆಯಾಗಿದ್ದ 8 ವರ್ಷದ ಬಾಲಕನ ಶವ ನಿರ್ಜನ ಪ್ರದೇಶದಲ್ಲಿ ಪತ್ತೆ ; ಕೊಲೆ ಶಂಕೆ

    ಹುಬ್ಬಳ್ಳಿ: ಪಾಳು ಬಿದ್ದ ನಿರ್ಜನ ಜಾಗದಲ್ಲಿ ಎಂಟು ವರ್ಷದ ಬಾಲಕನೊಬ್ಬನ ಶವ ಪತ್ತೆಯಾಗಿದ್ದ ಘಟನೆ ಹುಬ್ಬಳ್ಳಿಯ ದೊಡ್ಡ ಮನಿ ಕಾಲೊನಿಯಲ್ಲಿ ನಡೆದಿದ್ದು, ಕೊಲೆ ಮಾಡಿ ಎಸೆದಿರುವ ಶಂಕೆ ವ್ಯಕ್ತವಾಗಿದೆ.

    BIGG NEWS : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : ನಾಲ್ವರು ‘IAS’ ಅಧಿಕಾರಿಗಳ ವರ್ಗಾವಣೆ

    ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಅಧಿಸೂಚನೆ ಹೊರಡಿಸಿರುವಂತ ರಾಜ್ಯ...

    BIG NEWS; ‘SSLC’ ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆ : ಸೋಶಿಯಲ್ ಮೀಡಿಯಾದಲ್ಲಿ ವೈರಲ್

    ಕಲಬುರಗಿ : ಇಂದಿನಿಂದ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆ ಆರಂಭವಾಗಿದ್ದು, ಇಂದು ಪ್ರಥಮ ಭಾಷೆ ಕನ್ನಡ ಪರೀಕ್ಷೆ ನಡೆಯುತ್ತಿದೆ. ಇದರ ನಡುವೆ...

    ಯಕ್ಷಾಂಗಣ ಮಂಗಳೂರು ದಶಮಾನ ಸಡಗರ – ರಾಜ್ಯೋತ್ಸವ ಪುರಸ್ಕಾರ ಪ್ರದಾನ

    ಮಂಗಳೂರು: ‘ಸಾಮಾಜಿಕ ಹಾಗೂ ಸಾಂಸ್ಕೃತಿಕ ಸೇವೆಗಳಿಂದ ಲಭ್ಯವಾಗುವ ಸಂತ್ರೃ ಪ್ತ ಭಾವ ಮಹತ್ತರವಾದುದು. ಇದು ನಮ್ಮ ಬದುಕಿಗೆ ಸಾರ್ಥಕ್ಯವನ್ನು ತಂದು ಕೊಡುತ್ತದೆ’ ಎಂದು ಮುಂಬೈ ಉದ್ಯಮಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದರು.
    ನಗರದ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜು ರವೀಂದ್ರ ಕಲಾಭವನದಲ್ಲಿ ಯಕ್ಷಗಾನ ಚಿಂತನ ಮಂಥನ ಮತ್ತು ಪ್ರದರ್ಶನ ವೇದಿಕೆಯಾದ ‘ಯಕ್ಷಾಂಗಣ ಮಂಗಳೂರು’, ಮಂಗಳೂರು ವಿಶ್ವವಿದ್ಯಾ ನಿಲಯದ ಡಾl ದಯಾನಂದ ಪೈ, ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಮತ್ತು ಕರ್ನಾಟಕ ಯಕ್ಷ ಭಾರತಿ ಪುತ್ತೂರು ಸಹಯೋಗದೊಂದಿಗೆ ಆಯೋಜಿಸಿದ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮದ ‘ಸಪ್ತ ವಿಜಯ’ ಯಕ್ಷಗಾನ ತಾಳಮದ್ದಳೆ ಸಪ್ತಾಹ – 2022 ಹತ್ತನೇ ವರ್ಷದ ನುಡಿ ಹಬ್ಬದಲ್ಲಿ ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ ಸ್ವೀಕರಿಸಿ ಅವರು ಮಾತನಾಡಿದರು.
    ರಾಜಾಶ್ರಯ ಅಗತ್ಯ:
    ಸಪ್ತಾಹ ಉದ್ಘಾಟಿಸಿದ ಮುಂಬಯಿ ಉದ್ಯಮಿ – ಕಲಾಪೋಷಕರು, ಥಾಣೆ ಬಂಟ್ಸ್ ಎಸೋಸಿಯೇಷನ್ ನ ಮಾಜಿ ಅಧ್ಯಕ್ಷ ವೇಣುಗೋಪಾಲ್ ಎಲ್. ಶೆಟ್ಟಿ ಅವರು ‘ಕಲೆಗೆ ರಾಜಾಶ್ರಯ ಅಗತ್ಯ. ಕಲಾವಿದರನ್ನು ಪ್ರೋತ್ಸಾಹಿಸುವ
    ಕಾರ್ಯ ಎಲ್ಲೆಡೆಯಲ್ಲಿ ಆಗಬೇಕು. ಮುಂಬಯಿ ಕಲಾಭಿಮಾನಿಗಳು ಈ ವಿಚಾರದಲ್ಲಿ ಮಾದರಿಯಾಗಿದ್ದಾರೆ’ ಎಂದರು.
    ಮುಖ್ಯ ಅತಿಥಿಯಾಗಿ ಕರ್ನಾಟಕ ಬ್ಯಾಂಕಿನ ಮಹಾ ಪ್ರಬಂಧಕ ರಮೇಶ್ ಭಟ್ ಅವರು ‘ಬ್ಯಾಂಕ್ ಕಲೆ, ಕಲಾವಿದರನ್ನು ಪ್ರೋತ್ಸಾಹಿಸುವ ಕಾರ್ಯವನ್ನು ನಿರಂತರ ಮಾಡುತ್ತಾ ಬರುತ್ತಿದೆ’ ಎಂದರು.


    ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ :
    ಅಧ್ಯಕ್ಷತೆ ವಹಿಸಿದ್ದ ಕದ್ರಿ ಮಂಜುನಾಥ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾಗೂ ಯಕ್ಷಾಂಗಣ ಮಂಗಳೂರು ಗೌರವಾಧ್ಯಕ್ಷ ಡಾl ಎ.ಜೆ.ಶೆಟ್ಟಿ ಅವರು ಐಕಳ ಹರೀಶ್ ಶೆಟ್ಟಿ ಅವರಿಗೆ ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ ಪ್ರದಾನ ಮಾಡಿದರು.
    ‘ಕಲೆ, ಕಲಾವಿದರಿಗೆ ಪ್ರೋತ್ಸಾಹ ನೀಡುವುದು ಉದಾತ್ತ ಕಾರ್ಯ. ಯಕ್ಷಾಂಗಣ 9ವರ್ಷಗಳಿಂದ ಈ ಕಾರ್ಯವನ್ನು ಮಾಡುತ್ತಾ ಬಂದಿದೆ. ಕಲಾವಿದರ ಮಾನ – ಸಮ್ಮಾನದೊಂದಿಗೆ ಕಲಾ ಪ್ರದರ್ಶನ, ಚಿಂತನ-ಮಂಥನ ನಡೆಸುವ ಮೂಲಕ ಭಾಸ್ಕರ ರೈ ಕುಕ್ಕುವಳ್ಳಿ ಮತ್ತು ತಂಡದವರು ಸ್ತುತ್ಯ ಕೆಲಸ ಮಾಡುತ್ತಿದ್ದಾರೆ’ ಎಂದವರು ಹೇಳಿದರು.
    ಇದೇ ಸಂದರ್ಭದಲ್ಲಿ ಮುಂಬೈ ವಿಶ್ವವಿದ್ಯಾನಿಲಯ ಪ್ರಕಟಿಸಿದ ಐಕಳ ಹರೀಶ್ ಶೆಟ್ಟಿ ಅವರ ಅಭಿನಂದನಾ ಸಂಪುಟ ‘ಸಾರ್ವಭೌಮ’ ಗ್ರಂಥವನ್ನು ವೇದಿಕೆಯ ಅತಿಥಿಗಳಿಗೆ ವಿತರಿಸಲಾಯಿತು. ಲೇಖಕ ಕುಡುಮಲ್ಲಿಗೆ ಕೃಷ್ಣ ಶೆಟ್ಟಿ ಅವರ ‘ಯಕ್ಷಗಾನ’ ಕೃತಿಯನ್ನು ಬಿಡುಗಡೆಗೊಳಿಸಲಾಯಿತು.
    ಕನ್ನಡದ ನುಡಿಹಬ್ಬ:
    ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ ‘2013 ರ ನವೆಂಬರ್ ತಿಂಗಳಲ್ಲಿ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮವಾಗಿ ಆರಂಭಿಸಿದ ತಾಳಮದ್ದಳೆ ಸಪ್ತಾಹ ಕನ್ನಡದ ನುಡಿ ಹಬ್ಬವಾಗಿ ಮುಂದುವರೆದಿದೆ. ಬೇರೆಲ್ಲ ರಂಗಪ್ರಕಾರಗಳಲ್ಲಿ ಅನ್ಯ ಭಾಷೆಗಳ ಆನುಷಂಗಿಕ ಪ್ರಯೋಗ ಆಗುತ್ತಿರುವಾಗ ಶುದ್ಧ ಕನ್ನಡ ಕೇಳಿಸುವುದು ಯಕ್ಷಗಾನ ರಂಗಸ್ಥಳದಲ್ಲಿ ಮಾತ್ರ. ಅದಕ್ಕಾಗಿಯೇ ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ’ ಎಂದು ನುಡಿದರು.
    ಡಾ.ಜೋಶಿಗೆ ಅಭಿನಂದನೆ:
    ಈಚೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಅರ್ಥಧಾರಿ, ವಿದ್ವಾಂಸ ಡಾl ಎಂ.ಪ್ರಭಾಕರ ಜೋಶಿ ಅವರನ್ನು ಯಕ್ಷಾಂಗಣ ವತಿಯಿಂದ ಶಾಲು ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು.
    ವಿಶ್ರಾಂತ ಕುಲಪತಿ ಡಾl ಕೆ. ಚಿನ್ನಪ್ಪ ಗೌಡ, ಉದ್ಯಮಿಗಳಾದ ವಿ. ಕರುಣಾಕರ, ಸಿ.ಎಸ್. ಭಂಡಾರಿ, ವಿ.ವಿ. ಕಾಲೇಜಿನ ಪ್ರಾಂಶುಪಾಲೆ ಡಾl ಅನುಸೂಯ ರೈ, ಡಾl ದಯಾನಂದ ಪೈ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಡಾl ಶ್ರೀಪತಿಕಲ್ಲೂರಾಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ. ಅತಿಥಿಗಳಾಗಿದ್ದರು.
    ಕಾರ್ಯಾಧ್ಯಕ್ಷ ಭಾಸ್ಕರ ರೈ ಕುಕ್ಕುವಳ್ಳಿ ಸ್ವಾಗತಿಸಿದರು. ಸಂಚಾಲಕ ಕೆ.ರವೀಂದ್ರ ರೈ ಕಲ್ಲಿಮಾರು ಸನ್ಮಾನ ಪತ್ರ ವಾಚಿಸಿದರು. ಉಪಾಧ್ಯಕ್ಷ ಬೆಟ್ಟಂಪಾಡಿ ಸುಂದರ ಶೆಟ್ಟಿ, ಪ್ರಧಾನ ಸಂಚಾಲಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಜತೆ ಕಾರ್ಯದರ್ಶಿ ಕೆ. ಲಕ್ಷ್ಮೀನಾರಾಯಣ ರೈ ಹರೇಕಳ, ಉಮೇಶ ಆಚಾರ್ಯ ಗೇರುಕಟ್ಟೆ; ಸಮಿತಿ ಸದಸ್ಯರಾದ ಕರುಣಾಕರ ಶೆಟ್ಟಿ ಪಣಿಯೂರು, ಸುಧಾಕರ ರಾವ್ ಪೇಜಾವರ, ಸುಮಾ ಪ್ರಸಾದ್ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್ ನಿರೂಪಿಸಿದರು.
    ಷಡಾನನ ವಿಜಯ:
    ಸಮಾರಂಭದ ಬಳಿಕ ‘ಸಪ್ತ ವಿಜಯ’ ಸರಣಿಯಲ್ಲಿ ಪುತ್ತಿಗೆ ರಘುರಾಮ ಹೊಳ್ಳರ ಭಾಗವತಿಕೆಯಲ್ಲಿ ‘ಷಡಾನನ ವಿಜಯ’ ಮೊದಲ ತಾಳಮದ್ದಳೆ ಜರಗಿತು.

    Latest Posts

    ಕಡಬ: ವಾಟ್ಸಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾದ ಯುವಕ

    ಕಡಬ: ವಾಟ್ಸಪ್ ನಲ್ಲಿ ಸಾಯುವ ಕುರಿತ ಸ್ಟೇಟಸ್ ಹಾಕಿ ಯುವಕನೊರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ನಡೆದಿದೆ.

    ನಾಪತ್ತೆಯಾಗಿದ್ದ 8 ವರ್ಷದ ಬಾಲಕನ ಶವ ನಿರ್ಜನ ಪ್ರದೇಶದಲ್ಲಿ ಪತ್ತೆ ; ಕೊಲೆ ಶಂಕೆ

    ಹುಬ್ಬಳ್ಳಿ: ಪಾಳು ಬಿದ್ದ ನಿರ್ಜನ ಜಾಗದಲ್ಲಿ ಎಂಟು ವರ್ಷದ ಬಾಲಕನೊಬ್ಬನ ಶವ ಪತ್ತೆಯಾಗಿದ್ದ ಘಟನೆ ಹುಬ್ಬಳ್ಳಿಯ ದೊಡ್ಡ ಮನಿ ಕಾಲೊನಿಯಲ್ಲಿ ನಡೆದಿದ್ದು, ಕೊಲೆ ಮಾಡಿ ಎಸೆದಿರುವ ಶಂಕೆ ವ್ಯಕ್ತವಾಗಿದೆ.

    BIGG NEWS : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : ನಾಲ್ವರು ‘IAS’ ಅಧಿಕಾರಿಗಳ ವರ್ಗಾವಣೆ

    ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಅಧಿಸೂಚನೆ ಹೊರಡಿಸಿರುವಂತ ರಾಜ್ಯ...

    BIG NEWS; ‘SSLC’ ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆ : ಸೋಶಿಯಲ್ ಮೀಡಿಯಾದಲ್ಲಿ ವೈರಲ್

    ಕಲಬುರಗಿ : ಇಂದಿನಿಂದ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆ ಆರಂಭವಾಗಿದ್ದು, ಇಂದು ಪ್ರಥಮ ಭಾಷೆ ಕನ್ನಡ ಪರೀಕ್ಷೆ ನಡೆಯುತ್ತಿದೆ. ಇದರ ನಡುವೆ...

    Don't Miss

    ಕುಂದಾಪುರ: ಸರಣಿ ರಸ್ತೆ ಅಪಘಾತ – ಓರ್ವ ಸಾವು

    ಕುಂದಾಪುರ: ಇಲ್ಲಿನ ಕುಂಭಾಶಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸರಣಿ ರಸ್ತೆ ಅಪಘಾತ ಸಂಭವಿಸಿದ್ದು ಓರ್ವ ಸಾವಿಗೀಡಾಗಿ ಮತ್ತೋರ್ವ ಗಾಯಗೊಂಡ ಘಟನೆ ಸಂಭವಿಸಿದೆ. ಕುಂಭಾಶಿಯ ಪಾಕಶಾಲಾ ಹೊಟೇಲ್ ಸಮೀಪ ಹೋಂಡಾ ಡಿಯೋ...

    ನವದೆಹಲಿ: ಅಂಗಾಂಗ ದಾನ ಶ್ರೇಷ್ಠ ಕಾರ್ಯ- ಪ್ರಧಾನಿ ಮೋದಿ

    ನವದೆಹಲಿ: ಅಂಗಾಂಗ ದಾನದಂಥ ಮಾನವೀಯ ಕೆಲಸ ಮಾಡಬೇಕು ಎಂದು ಜನರಲ್ಲಿ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಅಲ್ಲದೇ ‘ಈ ನಿಟ್ಟಿನಲ್ಲಿ ನಮ್ಮ ಏಕರೂಪ ನೀತಿಯನ್ನು ರೂಪಿಸುತ್ತಿದ್ದು, ಅಂಗಾಂಗ ದಾನ...

    ಮಾಂತ್ರಿಕನ ಮಾತು ಕೇಳಿ 10 ವರ್ಷದ ಬಾಲಕನನ್ನು ಬಲಿ ಪಡೆದ ಮೂವರು ಅರೆಸ್ಟ್

    ಉತ್ತರ ಪ್ರದೇಶ: 10 ವರ್ಷದ ಬಾಲಕನನ್ನು ಮಾಂತ್ರಿಕನೊಬ್ಬ ನರಬಲಿ ಕೊಡುವಂತೆ ಹೇಳಿ ಕೊಂದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪರ್ಸಾ...

    ಬಂಟ್ವಾಳ: ನೇತ್ರಾವತಿ‌ ನದಿಗೆ ಹಾರಿ ಪುತ್ತೂರಿನ ಯುವಕ ಆತ್ಮಹತ್ಯೆ..!

    ಬಂಟ್ವಾಳ: ನೇತ್ರಾವತಿ‌ ನದಿಗೆ ಹಾರಿ ಪುತ್ತೂರಿನ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿಠ್ಠಲ್ ಕಾಮತ್ ಅವರ ಪುತ್ರ ವಿಘ್ನೇಶ್ ಕಾಮತ್(32) ಆತ್ಮಹತ್ಯೆ ಮಾಡಿಕೊಂಡವರು.

    BREAKING NEWS: ಕೊಚ್ಚಿಯಲ್ಲಿ ಟೇಕ್ ಆಫ್ ಆದ ಭಾರತೀಯ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ

    ಕೊಚ್ಚಿ: ಇಲ್ಲಿನ ನೆಡುಂಬಾಶ್ಶೇರಿ ವಿಮಾನ ನಿಲ್ದಾಣದಲ್ಲಿ ( Nedumbassery airport ) ಭಾನುವಾರ ಭಾರತೀಯ ಕೋಸ್ಟ್ ಗಾರ್ಡ್ (Indian Coast Guard - ICG) ಹೆಲಿಕಾಪ್ಟರ್ ಟೇಕ್ ಆಫ್ ಆಗುವ...