ಬೆಳ್ತಂಗಡಿ: ಎಸ್‌ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿಯಾಗಿದ್ದ ಡಾ. ಬಿ.ಯಶೋವರ್ಮ ದೀರ್ಘಕಾಲದ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಇವರಿಗೆ 66 ವರ್ಷ ವಯಸ್ಸಾಗಿತ್ತು. ಇವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಪತ್ನಿ, ಡಾ. ಹೇಮಾವತಿ ಹೆಗ್ಗಡೆಯವರ ಸಹೋದರ.
ಯಶೋವರ್ಮ ಅವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದರು. ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯದ ಕಾರಣಕ್ಕಾಗಿ ಸಿಂಗಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಅವರು ಮಂಗಳೂರು ವಿಶ್ವವಿದ್ಯಾನಿಲಯ ಪ್ರಾಂಶುಪಾಲರ ಸಂಘದ ಅಧ್ಯಕ್ಷರು ಸೇರಿದಂತೆ ಹಲವಾರು ಹುದ್ದೆಗಳ ಮೂಲಕ ಸೇವೆ ಸಲ್ಲಿಸಿದ್ದರು. ಎಸ್‌ಡಿಎಂಸಿ ಉಜಿರೆಯ ಪ್ರಾಂಶುಪಾಲರಾಗಿದ್ದ ಅವಧಿಯಲ್ಲಿ ಕಾಲೇಜು ನ್ಯಾಕ್‌ನಿಂದ ಸತತ ಮೂರು ಬಾರಿ ‘ಎ’ ದರ್ಜೆಯ ಮಾನ್ಯತೆ ಪಡೆದಿತ್ತು. ಕಾಲೇಜು ಎಫ್‌ಜೆಇಐ ಸ್ಥಾಪಿಸಿದ ಅತ್ಯುತ್ತಮ ಕಾಲೇಜಿಗೆ ರಾಷ್ಟ್ರೀಯ ಪ್ರಶಸ್ತಿಯನ್ನು ಸಹ ಪಡೆಯಿತು.
1986ರಲ್ಲಿ ಸೈಕಾಲಜಿ ಕ್ಷೇತ್ರದಲ್ಲಿ ಪಿಎಚ್ ಡಿ ಪದವಿ ಪಡೆದಿದ್ದ ಯಶೋವರ್ಮ ಅವರು ಸಸ್ಯಶಾಸ್ತ್ರದಲ್ಲಿ ಸಾಕಷ್ಟು ಪರಿಣತಿ ಪಡೆದಿದ್ದರು. ಈ ವಿಷಯದ ಕುರಿತಾಗಿ ಮತ್ತಷ್ಟು ಡಿಮಿಸ್ಟಿಫಿನೇಶನ್ ಗೆ ನಿರಂತರವಾಗಿ ಮಾಡಿದ ಕೆಲಸ ಫಲಿತಾಂಶ ರೂಪದಲ್ಲಿ ಕಂಡು ಬಂದಿವೆ. ಅವರ ಹೆಸರಿನಲ್ಲಿ ಅನೇಕ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಪ್ರಕಟಣೆಗಳೂ ಬಂದಿವೆ.

