ಬೆಂಗಳೂರು : ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮಾರ್ಚ್ 24ರ ತನಕ ಬೆಂಗಳೂರು ಸೇರಿದಂತೆ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಲಕೊಲ್ಲಿಯಲ್ಲಿನ ‘ಅಸನಿ’ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಶುಕ್ರವಾರದಿಂದ ಮಳೆಯಾಗುತ್ತಿದೆ.
ಬೆಂಗಳೂರು ನಗರದಲ್ಲಿ ಶನಿವಾರ, ಭಾನುವಾರ ಮತ್ತು ಸೋಮವಾರ ಸಂಜೆ ಮಳೆಯಾಗಿದೆ.
ಭಾರತೀಯ ಹವಾಮಾನ ಇಲಾಖೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ.
ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಮಾರ್ಚ್ 22 ರಿಂದ 24ರ ತನಕ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಾರ್ಚ್ 23ರಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.