ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ಮರೆಯಾಗಿದ್ದ, ಮಳೆರಾಯ ಈಗ ಮತ್ತೆ ರಾಜ್ಯದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈ ನಡುವೆ ಹವಾಮಾನ ಇಲಾಖೆ 9 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
ಸೆ.3 ಮತ್ತು ಸೆ.4ರಂದು ರಾಜ್ಯದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಲಿದೆ ಅಂತ ತಿಳಿಸಿದ್ದು, ಸೆ.3ರಂದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳಿಗೆ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.
ಸೆ.4ರಂದು ಬೀದರ್, ಕಲಬುರಗಿ ಜಿಲ್ಲೆಗಳಿಲ್ಲಿ ಮಳೆ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.