ಉಡುಪಿ: ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸುವ ಸಲುವಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಪ್ರಿಲ್ 26 ರಂದು ಉಡುಪಿ ಜಿಲ್ಲೆಗೆ ಆಗಮಿಸಲಿದ್ದಾರೆ.ಜಿಲ್ಲೆಯ ಬೈಂದೂರಿನಲ್ಲಿ ಅದೇ ದಿನ ಬೃಹತ್ ಸಾರ್ವಜನಿಕ ಪ್ರಚಾರ ಸಭೆ ಆಯೋಜಿಸಲಾಗಿದೆ. ಇನ್ನು ಮೇ 4 ರಂದು ಮಂಗಳೂರಿನ ಮುಲ್ಕಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.ಮುಲ್ಕಿ – ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಚುನಾವಣಾ ಪ್ರಚಾರ ರ್ಯಾಲಿ ಆಯೋಜಿಸಲಾಗಿದ್ದು ಈ ಎರಡೂ ಪ್ರಚಾರ ಕಾರ್ಯದಲ್ಲಿ ಸಾವಿರಾರು ಜನರನ್ನು ಸೇರಿಸಲು ಬಿಜೆಪಿ ಪ್ಲಾನ್ ಮಾಡಿಕೊಂಡಿದೆ. ಮೋದಿಯವರ ಭೇಟಿಯಿಂದ ಕಾಪು, ಕಾರ್ಕಳ, ಉಡುಪಿ ವಿಧಾನಸಭಾ ಕ್ಷೇತ್ರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಗೆ ಶಕ್ತಿ ಸಿಗಲಿದೆ.ಯೋಗಿ ಆದಿತ್ಯನಾಥ್ ಬೈಂದೂರು ಪ್ರಚಾರಸಭೆ ಕುಂದಾಪುರ ಮತ್ರು ಬೈಂದೂರು ಕ್ಷೇತ್ರದ ಕಾರ್ಯಕರ್ತರಲ್ಲಿ ವಿಶೇಷ ಹುರುಪು ತುಂಬಲಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನವೀನ್ ಶೆಟ್ಟಿ ಕುತ್ಯಾರು ಹೇಳಿದ್ದಾರೆ.
©2021 Tulunada Surya | Developed by CuriousLabs