ಉಳ್ಳಾಲ : ಕೊಳದಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ಉಳ್ಳಾಲ ತಲಪಾಡಿಯಲ್ಲಿ ಸಂಭವಿಸಿದ್ದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ದುರ್ಗಿಪಳ್ಳ ನಿವಾಸಿ ಹರೀಶ ಯಾನೆ ಹರಿ ಪ್ರಸಾದ್ ಆಚಾರ್ಯ (36) ಮೃತ ವ್ಯಕ್ತಿಯಾಗಿದ್ದಾರೆ.
ಅವಿವಾಹಿತರಾಗಿದ್ದ ಹರಿ ವೆಲ್ಡಿಂಗ್ ವೃತ್ತಿ ಮಾಡುತ್ತಿದ್ದು ಕುಡಿತದ ಚಟ ಹೊಂದಿದ್ದ ಎನ್ನಲಾಗಿದೆ,
ಕಳೆದ ನಾಲ್ಕು ದಿವಸಗಳಿಂದ ಮನೆಗೂ ಹೋಗಿರಲಿಲ್ಲ ಎಂದು ತಿಳಿದುಬಂದಿದೆ.
ಹರಿಪ್ರಸಾದ್ ಯುವರಾಜ್ ಯಾನೆ ಮುನ್ನ, ಲೋಹಿತ್, ನವೀನ್ ದೇವಾಡಿಗ, ನಿತೇಶ್ ಉಚ್ಚಿಲ್ ಎಂಬವರೊಂದಿಗೆ ಸಮೀಪದ ಖಾಸಗಿ ಲೇ ಔಟ್ ನಲ್ಲಿರುವ ಕೊಳದಲ್ಲಿ ಸ್ನಾನಕ್ಕೆ ತೆರಳಿದ್ದ ಸಂದರ್ಭ ಅಕಸ್ಮತ್ ಆಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ದೂರಲಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಮೃತದೇಹವನ್ನು ಮೇಲಕ್ಕೆತ್ತಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ