ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಬಳಿ ಸರಪಾಡಿಯ ಯುವಕ ಪದ್ಮರಾಜ್ ಎಂಬಾತನಿಂದ ಚೂರಿ ಇರಿತಕ್ಕೊಳಗಾಗಿ ತೀವ್ರ ಗಾಯಗೊಂಡಿದ್ದ ಯುವತಿ ವಿಟ್ಲ ಬಳಿಯ ಅಳಿಕೆ ನಿವಾಸಿ ಗೌರಿ(18.ವ) ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ವಂತ್ ಮಾಹಿತಿ ನೀಡಿದ್ದಾರೆ.ಆರೋಪಿ ಸರಪಾಡಿಯ ಪದ್ಮರಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಕೃತ್ಯಕ್ಕೆ ಬಳಸಲಾದ ಚೂರಿ ಮತ್ತು ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.ಯುವಕನನ್ನು ಬಂಟ್ವಾಳದ ಮಾವಿನಕಟ್ಟೆಯ ಬಳಿ ವಶಪಡಿಸಿಕೊಳ್ಳಲಾಗಿದೆ.ಆರೋಪಿಯು ಮಣಿನಾಲ್ಕೂರು ಗ್ರಾಮದ ನೈಬೇಲು ನಿವಾಸಿಯಾಗಿದ್ದಾನೆ ಎಂದು ತಿಳಿದುಬಂದಿದೆ.
©2021 Tulunada Surya | Developed by CuriousLabs