Wednesday, October 9, 2024
spot_img
More

    Latest Posts

    ಮಂಗಳೂರು: ಯುವತಿ ಡ್ರಗ್ ಅಡಿಕ್ಟ್; ಕದ್ರಿ ಪೊಲೀಸರೊಂದಿಗೆ ಆಕ್ರಮಣಕಾರಿಯಾಗಿ ವರ್ತಿಸುತ್ತಿರುವ ವೈರಲ್‌ ವೀಡಿಯೋ ಬಗ್ಗೆ ಕಮೀಷನರ್‌ ಸ್ಪಷ್ಟನೆ…!

    ಮಂಗಳೂರು: ನಗರದ ಕದ್ರಿ ಪೊಲೀಸ್‌ ಠಾಣೆಯಲ್ಲಿ ಯುವತಿಯೋರ್ವಳು ಆಕ್ರಮಣಕಾರಿಯಾಗಿ ವರ್ತಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಮಾದಕ ದ್ರವ್ಯ ವ್ಯಸನಿ ಎಂಬ ಶೀರ್ಷಿಕೆಯಲ್ಲಿ ವೀಡಿಯೋ ಹರಿದಾಡಿದೆ.

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಂಗಳೂರು ನಗರ ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌, ಸೆ.1ರಂದು ಪಂಪ್‌ವೆಲ್‌ನಲ್ಲಿರುವ ಮೆಡಿಕಲ್‌ನಲ್ಲಿ ಓರ್ವ ಯುವತಿ ಆಕ್ರಮಣಕಾರಿ ರೀತಿಯಲ್ಲಿ ವರ್ತನೆ ಮಾಡುತ್ತಿರುವ ಬಗ್ಗೆ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ಲಭಿಸಿತ್ತು.

    ಆಕೆ ಮಾದಕ ದ್ರವ್ಯ ಸೇವನೆ ಮಾಡಿರಬೇಕೆಂಬ ಸಂದೇಹದಿಂದ ವೈದ್ಯಕೀಯ ತಪಾಸಣೆಗೆ ಕರೆದುಕೊಂಡು ಹೋಗಲು ಪ್ರಯತ್ನಿಸಿದಾಗ ಆಕೆ ಅಧಿಕಾರಿಗಳ ಮೇಲೆ ಆಕ್ರಮಣಕಾರಿಯಾಗಿ ವರ್ತಿಸಿದ್ದಳು.

    ಆ ಬಳಿಕ ಠಾಣೆಯ ಮಹಿಳಾ ಸಿಬಂದಿ ಜತೆ ಇಲಾಖಾ ವಾಹನದಲ್ಲಿ ಅಸ್ಪತ್ರೆಗೆ ಕರೆದುಕೊಂಡು ಹೋಗಿ ತಪಾಸಣೆ ನಡೆಸಿದಾಗ ಪೂರಕ ಫಲಿತಾಂಶ ಬಂದಿಲ್ಲ. ಅನಂತರ ಅಕೆಯನ್ನು ಆಕೆಯ ಪೋಷಕರ ವಶಕ್ಕೆ ವಹಿಸಿದ್ದು,

    ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಅಗರ್‌ವಾಲ್‌ ತಿಳಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss