Friday, December 1, 2023

ಬೆಂಗಳೂರು ರಾಜ – ಮಹಾರಾಜ ಜೋಡುಕರೆ ಕಂಬಳ ಕೂಟದ ಫಲಿತಾಂಶ

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 07 ಜೊತೆ ಅಡ್ಡಹಲಗೆ: 06 ಜೊತೆ ಹಗ್ಗ ಹಿರಿಯ: 21 ಜೊತೆ ನೇಗಿಲು ಹಿರಿಯ: 32 ಜೊತೆ ಹಗ್ಗ ಕಿರಿಯ: 31...
More

    Latest Posts

    ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವತಿಯಿಂದ ಕನಕ ಜಯಂತಿ ಆಚರಣೆ

    ಉಡುಪಿ: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವತಿಯಿಂದ ಭಕ್ತ ಕನಕದಾಸರ ಕನಕ ಜಯಂತಿ ಆಚರಣೆ ಕಾರ್ಯಕ್ರಮ ದಿನಾಂಕ 30-11-2023ರಂದು ಸಂಜೆ 4.30ಕ್ಕೆ ಸರಿಯಾಗಿ ಎಂ.ಜಿ.ಎಂ ಕಾಲೇಜು ಬಳಿಯಿರುವ ತುಳುನಾಡ...

    ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

    ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ...

    ಡಿ.1 ರಂದು “ರಾಪಟ” ತುಳು ಸಿನೆಮಾ ಬಿಡುಗಡೆ

    ಬೊಳ್ಳಿ ಮೂವೀಸ್ ಹಾಗೂ ಅವಿಕಾ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ,ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾ ರಾಪಟ ಡಿ.1...

    ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತ ಲೋಕಾಯುಕ್ತ ಬಲೆಗೆ

    ಕುಂದಾಪುರ : ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಗುಮಾಸ್ತ ಬಿ.ಮಂಜುನಾಥ್ ಪೂಜಾರಿ ಲೋಕಾಯಕ್ತ...

    ಉಡುಪಿ: ನಾಲ್ವರ ಹತ್ಯೆ – ಕೊಲೆಯಾದವರ ಚಾರಿತ್ರ್ಯ ಹನನವಾಗುವಂತಹ ವರದಿಗಳನ್ನು ಪ್ರಕಟಿಸುವುದು ಅತ್ಯಂತ ಖಂಡನೀಯ: ಜಿಲ್ಲಾ ಮುಸ್ಲಿಂ ಒಕ್ಕೂಟ

    ಉಡುಪಿ: ನೇಜಾರಿನಲ್ಲಿ ನಡೆದ ಭಯಾನಕ ಹತ್ಯಾಕಾಂಡದ ಆರೋಪಿಯನ್ನು ಉಡುಪಿ ಪೊಲೀಸರು ಎರಡು ದಿನಗಳೊಳಗೆ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಉಡುಪಿ ಪೋಲೀಸರ ಈ ದಕ್ಷತೆ ಹಾಗು ಚುರುಕಿನ ಕಾರ್ಯಾಚರಣೆ ಅಭಿನಂದನಾರ್ಹವಾಗಿದೆ. ಭೀಕರ ಕಗ್ಗೊಲೆಗಳನ್ನು ನಡೆಸಿದ ಹಂತಕನನ್ನು ತಡ ಮಾಡದೇ ಬಂಧಿಸಿರುವುದರಿಂದ ನೇಜಾರು ಪರಿಸರ ಮಾತ್ರವಲ್ಲ ಇಡೀ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜನರು ಸಮಾಧಾನದ ನಿಟ್ಟುಸಿರು ಬಿಡುವಂತಾಗಿದೆ. ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದ ಎಲ್ಲ ಪೊಲೀಸ್ ಸಿಬ್ಬಂದಿಗೆ ಇದಕ್ಕಾಗಿ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಹೊಣೆಗಾರರ ತುರ್ತು ಸಭೆ ಬಳಿಕ ನೀಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.

    ಇದೇ ಸಂದರ್ಭದಲ್ಲಿ ಕೆಲವು ಚಾನಲ್ ಗಳು, ವೆಬ್ ಸೈಟ್ ಗಳು ಸಹಿತ ಮಾಧ್ಯಮದ ಕೆಲವು ವಿಭಾಗಗಳಲ್ಲಿ ಕಗ್ಗೊಲೆಯಾಗಿರುವ ಕುಟುಂಬದ ಸದಸ್ಯರ ಬಗ್ಗೆ ಕೀಳು ಅಭಿರುಚಿಯ, ಆಧಾರ ರಹಿತ ಊಹಾಪೋಹಗಳನ್ನೇ ಅಧಿಕೃತ ಸುದ್ದಿಯಂತೆ ಪ್ರಕಟಿಸುತ್ತಿರುವುದು ಅತ್ಯಂತ ಖಂಡನಾರ್ಹವಾಗಿದೆ ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಹೇಳಿದೆ. ಈಗಷ್ಟೇ ಹಂತಕನ ಬಂಧನವಾಗಿದೆ. ಆತನ ಪೂರ್ಣ ವಿಚಾರಣೆಗಾಗಿ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಹತ್ಯಾಕಾಂಡದ ಹಿಂದಿನ ನಿಜವಾದ ಕಾರಣಗಳು ಪೋಲೀಸರ ಸಮಗ್ರ ತನಿಖೆ ಹಾಗು ವಿಚಾರಣೆ ಬಳಿಕವೇ ಗೊತ್ತಾಗಬೇಕಿದೆ. ಹೀಗಿರುವಾಗ ಕೆಲವು ಮಾಧ್ಯಮಗಳು ತೀರಾ ಬೇಜವಾಬ್ದಾರಿಯುತವಾಗಿ ವದಂತಿಗಳು, ಊಹಾಪೋಹಗಳನ್ನು ಆಧರಿಸಿ ತೀರಾ ಕೀಳು ಮಟ್ಟದ ಹಾಗು ಕೊಲೆಯಾದವರ ಚಾರಿತ್ರ್ಯ ಹನನವಾಗುವಂತಹ ವರದಿಗಳನ್ನು ಪ್ರಕಟಿಸುವುದು ಅತ್ಯಂತ ಖಂಡನೀಯ. ಕಾರಣ ಏನಿದ್ದರೂ ಇಂತಹದೊಂದು ಹತ್ಯಾಕಾಂಡಕ್ಕೆ ಸಮರ್ಥನೆ ಇಲ್ಲ ಎಂಬುದು ಅತ್ಯಂತ ಸ್ಪಷ್ಟವಾಗಿದೆ. ಆ ಬಗ್ಗೆ ಯಾರಿಗೂ ಯಾವುದೇ ಸಂಶಯವಿಲ್ಲ. ಹಾಗಾಗಿ ಈಗ ಪೋಲೀಸರ ವಿಚಾರಣೆ ಮುಗಿಯುವವರೆಗೆ ಎಲ್ಲರೂ ತಾಳ್ಮೆಯಿಂದ ಸಹಕರಿಸಬೇಕಾಗಿದೆ. ಈ ಸಂದರ್ಭದಲ್ಲಿ ವದಂತಿಗಳನ್ನು ಹರಡಬಾರದು. ಮಾಧ್ಯಮಗಳು ಇನ್ನಷ್ಟು ಸಂಯಮದಿಂದ ವರದಿಗಾರಿಕೆ ಮಾಡಬೇಕು. ಇಂತಹ ಆಘಾತಕಾರಿ ಘಟನೆಯನ್ನು ತಮ್ಮ ಟಿ ಆರ್ ಪಿ ಹೆಚ್ಚಿಸುವ ದಾಳವಾಗಿ ಯಾವುದೇ ಮಾಧ್ಯಮ ಬಳಸಬಾರದು ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಹೇಳಿದೆ.ಉಡುಪಿಯ ಇತಿಹಾಸದಲ್ಲೇ ನಡೆದಿರುವ ಈ ಅತ್ಯಂತ ಬರ್ಬರ ಹತ್ಯಾಕಾಂಡದ ಸಮಗ್ರ ತನಿಖೆ ನಡೆಯಬೇಕು. ಈ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ಆದಷ್ಟು ಶೀಘ್ರವಾಗಿ ಮುಗಿಯಬೇಕು. ಆರೋಪಿ ಹಾಗು ಆತನ ಹಿಂದೆ ಯಾರೇ ಇದ್ದರೂ ಅವರೆಲ್ಲರಿಗೂ ಕಾನೂನು ಪ್ರಕಾರ ಅತ್ಯಂತ ಕಠಿಣ ಶಿಕ್ಷೆಯಾಗಬೇಕು. ಅದಕ್ಕಾಗಿ ಒಬ್ಬ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ರನ್ನು ಈ ಪ್ರಕರಣದ ವಿಚಾರಣೆಗೆ ಸಹಕರಿಸಲು ಸರಕಾರ ನೇಮಿಸಬೇಕು ಎಂದು ಮುಸ್ಲಿಂ ಒಕ್ಕೂಟ ಆಗ್ರಹಿಸಿದೆ.

    Latest Posts

    ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವತಿಯಿಂದ ಕನಕ ಜಯಂತಿ ಆಚರಣೆ

    ಉಡುಪಿ: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವತಿಯಿಂದ ಭಕ್ತ ಕನಕದಾಸರ ಕನಕ ಜಯಂತಿ ಆಚರಣೆ ಕಾರ್ಯಕ್ರಮ ದಿನಾಂಕ 30-11-2023ರಂದು ಸಂಜೆ 4.30ಕ್ಕೆ ಸರಿಯಾಗಿ ಎಂ.ಜಿ.ಎಂ ಕಾಲೇಜು ಬಳಿಯಿರುವ ತುಳುನಾಡ...

    ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

    ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ...

    ಡಿ.1 ರಂದು “ರಾಪಟ” ತುಳು ಸಿನೆಮಾ ಬಿಡುಗಡೆ

    ಬೊಳ್ಳಿ ಮೂವೀಸ್ ಹಾಗೂ ಅವಿಕಾ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ,ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾ ರಾಪಟ ಡಿ.1...

    ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತ ಲೋಕಾಯುಕ್ತ ಬಲೆಗೆ

    ಕುಂದಾಪುರ : ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಗುಮಾಸ್ತ ಬಿ.ಮಂಜುನಾಥ್ ಪೂಜಾರಿ ಲೋಕಾಯಕ್ತ...

    Don't Miss

    ಮಂಗಳೂರು: ಅರ್ಧದಲ್ಲಿಯೆ ಸ್ಥಗಿತಗೊಂಡ ಅಪಾರ್ಟ್ಮೆಂಟ್ ಲಿಫ್ಟ್ – ಅಗ್ನಿಶಾಮಕ ದಳದಿಂದ ಐವರ ರಕ್ಷಣೆ

    ಮಂಗಳೂರು: ನಗರದ ಅಪಾರ್ಟ್ಮೆಂಟ್ ಒಂದರಲ್ಲಿ ಲಿಫ್ಟ್ ಕೆಟ್ಟು ಅರ್ಧದಲ್ಲಿಯೆ ಸ್ಥಗಿತಗೊಂಡಿದ್ದು, ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದ ಐವರನ್ನು ಅಗ್ನಿಶಾಮಕದಳದ ಸಿಬ್ಬಂದಿ ರಕ್ಷಿಸಿದ ಘಟನೆ ನಡೆದಿದೆ. ನಗರದ ಬೆಂದೂರಿನಲ್ಲಿರುವ ಶಿಲ್ಪಾ ಪ್ಯಾಲೇಸ್ ಎಂಬ ಅಪಾರ್ಟ್ಮೆಂಟ್...

    ಮಂಗಳೂರು : ಮರಣ ಪ್ರಮಾಣ ದೃಢೀಕರಣಕ್ಕೆ 13 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ವಿಎ

    ಮಂಗಳೂರು : ಅಜ್ಜನ ಮರಣ ಪ್ರಮಾಣ ಪತ್ರದ ದೃಢೀಕರಣಕ್ಕೆ 13 ಸಾವಿರ ಲಂಚ ಕೇಳಿದ ಚೇಳ್ಯಾರು ಗ್ರಾಮದ ವಿಎ ಶ್ರೀ ವಿಜಿತ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ...

    ಮಂಗಳೂರು: ಎಮ್ಮೆಕೆರೆ ಕ್ರೀಡಾಂಗಣದ ಅಭಿವೃದ್ಧಿಗೆ ಶಂಕು ಸ್ಥಾಪನೆ

    ಮಂಗಳೂರು: ಎಮ್ಮೆಕೆರೆ ಕ್ರೀಡಾಂಗಣದ ಅಭಿವೃದ್ಧಿಗೆ ಶಂಕು ಸ್ಥಾಪನೆ ಬೆಳಗ್ಗೆ 11 ಗಂಟೆಗೆ ಎಮ್ಮೆಕೆರೆ ಮೈದಾನದಲ್ಲಿ ಜನ ಪ್ರತಿನಿಧಿಗಳ ಉಪಸ್ಥಿತಿಯೊಂದಿಗೆ ನಡೆದಿದೆ.

    ಬೆಳ್ತಂಗಡಿ: ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ – ಸವಾರ ಸಾವು

    ಬೆಳ್ತಂಗಡಿ: ಬೈಕ್ ನ ಸೈಡ್ ಸ್ಟ್ಯಾಂಡ್ ತೆಗೆಯದೆ ಬೈಕ್ ಚಲಾಯಿಸಿದ ಪರಿಣಾಮ ಬೈಕ್ ನಿಯಂತ್ರಣ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನಪ್ಪಿದ ಘಟನೆ ಬೆಳ್ತಂಗಡಿಯ ಉಜಿರೆಯಲ್ಲಿ ನಡೆದಿದ್ದು,...

    ಯಕ್ಷಾಂಗಣ ಸಪ್ತಾಹದಲ್ಲಿ ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಸಂಸ್ಮರಣೆ

    ಮಂಗಳೂರು: 'ಸಾಧನ ಶೀಲ ಕಲಾವಿದರ ಹೆಸರಿನೊಂದಿಗೆ ಅವರ ಮನೆತನದ ಅಥವಾ ಊರಿನ ಹೆಸರು ಸೇರಿಕೊಂಡಿರುತ್ತದೆ. ಇದು ಅಂಥವರ ಸಮಗ್ರ ಕುಟುಂಬಕ್ಕೆ ಸಲ್ಲುವ ಗೌರವ. ಬೆಟ್ಟಂಪಾಡಿ ಬಾಳಪ್ಪ ಶೆಟ್ಟರು ಈ ನಿಟ್ಟಿನಲ್ಲಿ...