ಉಡುಪಿ: ಆ್ಯಪ್ ಒಂದರಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಲಾಭಾಂಶ ಪಡೆಯುವ ಬಗ್ಗೆ ಟೆಲಿಗ್ರಾಮ್ ಆ್ಯಪ್ ಮೂಲಕ ಬಂದಿದ್ದ ಸಂದೇಶವನ್ನು ನಂಬಿದ ವ್ಯಕ್ತಿಯೊಬ್ಬರು 43.43 ಲಕ್ಷ ರೂ. ಕಳೆದುಕೊಂಡಿದ್ದು ಈ ಬಗ್ಗೆ ದೂರು ದಾಖಲಾಗಿದೆ. ಪರ್ಕಳದ ಯತಿರಾಜ್ ವಂಚನೆಗೊಳಗಾದವರು. ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಮಿಷ ಒಡ್ಡಿದ ಆರೋಪಿಗಳು ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುವಂತೆ ತಿಳಿಸಿದರು. ಅದರಂತೆ ಹಂತಹಂತವಾಗಿ ಒಟ್ಟು 43.43 ಲಕ್ಷ ರೂ. ಹಣ ಪಾವತಿಸಿದ್ದಾರೆ. ಹೂಡಿಕೆ ಮಾಡಿದ ಹಣ ಸಹಿತ ಲಾಭಾಂಶವನ್ನೂ ನೀಡದೆ ವಂಚನೆ ಮಾಡಲಾಗಿದೆ ಎಂದು ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
Trending
- ಅದ್ದೂರಿಯಾಗಿ ನಡೆದ 76 ನೇ ಗಣರಾಜ್ಯೋತ್ಸವ ಸಮಾರಂಭ
- ತರುಣವೃಂದ ಊರ್ವ ಹೊಯ್ಗೆಬೈಲ್ ಇದರ 60ನೇ ವರ್ಷದ ವಜ್ರ ಮಹೋತ್ಸವದ ಉದ್ಘಾಟನೆ ಕಾರ್ಯಕ್ರಮ ಲಾಂಛನ ಅನಾವರಣ
- ಭಾರತದ ಸಂವಿಧಾನದ ಮಹತ್ವ ಅರಿಯಿರಿ – ಪ್ರಶಾಂತ್ ಭಟ್ ಕಡಬ
- ಯಕ್ಷಗಾನ ತಾಳಮದ್ದಳೆಯ ಹಿರಿಯ ಅರ್ಥಧಾರಿ ಬರೆ ಕೇಶವ ಭಟ್ಟ (84) ನಿಧನ
- ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ (62) ನಿಧನ
- ಮಂಗಳೂರು : ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಮಸಾಜ್ ಪಾರ್ಲರ್ ಮೇಲೆ ಮಂಗಳೂರಿನ ಸಂಘಟನೆಯೊಂದರ ಕಾರ್ಯಕರ್ತರಿಂದ ದಾಳಿ
- ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಮಸಾಜ್ ಪಾರ್ಲರ್ ಮೇಲೆ ಶ್ರೀರಾಮ ಸೇನೆ ಕಾರ್ಯಕರ್ತರು ದಾಳಿ
- ಕರ್ನಾಟಕ ಜಾನಪದ ವಿಶ್ವ ವಿದ್ಯಾಲಯ ಗೂಟಗೂಡಿ, ಶಿಗ್ಗಾವಿ, ಹಾವೇರಿ ವತಿಯಿಂದ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ ಪೂಜ್ಯ ಸ್ವಾಮೀಜಿ ಯವರನ್ನು ಸನ್ಮಾನ