ಉಡುಪಿ: ನಗರದಲ್ಲಿ ಮಾದಕ ವಸ್ತು ಎಂ.ಡಿ.ಎಂ.ಎ ಹಾಗೂ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು ಆತನಿಂದ 43,800 ಮೌಲ್ಯದ ಎಂ.ಡಿ.ಎಂ.ಎ ಸಹಿತ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಭು ಡಿ.ಟಿ ಹಾಗೂ ಉಡುಪಿ ನಗರ ಠಾಣೆ ಪೊಲೀಸ್ ನಿರೀಕ್ಷಕ ಮಂಜುನಾಥ್. ವಿ ಬಡಿಗೇರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯಿತು.ಬಂಧಿತ ಆರೋಪಿ ಇಕ್ಬಾಲ್ (33) ಎಂದು ತಿಳಿಯಲಾಗಿದೆ.ಆರೋಪಿ ಮೂಡನಿಡಂಬೂರು ಗ್ರಾಮದ ಗರಡಿ ರಸ್ತೆಯಲ್ಲಿ ಸ್ಕೂಟಿಯಲ್ಲಿ ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 172/2025 ಕಲಂ NARCOTIC DRUGS & PSYCHOTROPIC SUBSTANCES ACT, 1985 (U/s-8(C) 20(b)(II)(A) ರಂತೆ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Trending
- ಡಿಸೆಂಬರ್ 5 ರಂದು ಬೆಳಿಗ್ಗೆ 8.55ಕ್ಕೆ ಶಿಲಾನ್ಯಾಸ ಕಾರ್ಯಕ್ರಮ
- ಯಕ್ಷಗಾನ ತಾಳಮದ್ದಳೆ ಸಪ್ತಾಹ ಸಮಾರೋಪ – ಯಕ್ಷಾಂಗಣ ಪ್ರಶಸ್ತಿ ಪ್ರದಾನ
- “ಎಂಸಿಎಫ್ ಹೆಸರು ಉಳಿಸಿ” ಅಭಿಯಾನ – ಐತಿಹಾಸಿಕ ಮೊದಲ ಸಭೆ ಮಂಗಳೂರಿನಲ್ಲಿ ಯಶಸ್ವಿ
- ಕಾಪು : ರಾಷ್ಟ್ರೀಯ ಹೆದ್ದಾರಿ–66ರಲ್ಲಿ ಭೀಕರ ಅಪಘಾತ – ನಾಲ್ವರು ಸ್ಥಳಾಂತರಿಸುವ ವೇಳೆ ಮೃತ್ಯು
- ತೀಯಾ ಸಮುದಾಯದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಅಗತ್ಯ – ಸದಾಶಿವ ಉಳ್ಳಾಲ್
- ಡಿ.ಕೆ. ಟ್ರಾನ್ಸ್ಪೋರ್ಟ್ & ಲಾಜಿಸ್ಟಿಕ್ ಸರ್ವೀಸಸ್ – ಹೊಸ ಕಚೇರಿ ಉದ್ಘಾಟನೆ
- ಪಿಲಿಪಂಜ” ತುಳು ಚಲನಚಿತ್ರದ ಎರಡನೇ ಹಾಡಾದ ಫ್ರೆಂಡ್ಷಿಪ್ ಸಾಂಗ್, ಭಾನುವಾರ ಮಂಗಳೂರಿನ ಭಾರತ್ ಮಾಲ್ನಲ್ಲಿ ಅದ್ಧೂರಿಯಾಗಿ ಬಿಡುಗಡೆ
- ಉಡುಪಿ: ಪ್ರಧಾನಿ ನರೇಂದ್ರ ಮೋದಿ ಭವ್ಯ ರೋಡ್ ಶೋ – ಜನಸಾಗರದ ನಡುವೆ ಭಾವಪೂರ್ಣ ಸ್ವಾಗತ
