ಬೆಂಗಳೂರು: ತುಳುವಿಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವ ಬಗ್ಗೆ ಈಗಾಗಲೇ ಎರಡು ಭಾಷೆಗಳಿಗೆ ರಾಜ್ಯ ಭಾಷೆಯ ಸ್ಥಾನಮಾನ ನೀಡಿರುವ ಬಿಹಾರ, ಪಶ್ಚಿಮ ಬಂಗಾಲ ಮತ್ತು ಆಂಧ್ರ ಪ್ರದೇಶಕ್ಕೆ ಅಧಿಕಾರಿಗಳ ತಂಡವನ್ನು ಕಳುಹಿಸಿ ವರದಿ ಪಡೆದು ಕಾನೂನು ಇಲಾಖೆಗೆ ಸಲ್ಲಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ವಿಧಾನ ಪರಿಷತ್ ಸದಸ್ಯ ಬಿ. ಎಂ. ಫಾರೂಖ್ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ತುಳುವಿಗೆ ರಾಜ್ಯದ ಎರಡನೇ ಭಾಷೆಯ ಸ್ಥಾನ ನೀಡುವುದು ನಮ್ಮ ಗಮನದಲ್ಲಿದೆ. ಆದರೆ ನಿಯಮಗಳ ಪಾಲನೆ ಆಗಬೇಕಿದೆ. ಡಾ| ಮೋಹನ್ ಆಳ್ವರ ಸಮಿತಿ ನೀಡಿದ ವರದಿ ನಮ್ಮ ಮುಂದಿದೆ. ಆದರೆ ಕಾನೂನು ಇಲಾಖೆಯು ಅನ್ಯ ರಾಜ್ಯಗಳ ಸ್ಥಿತಿಗತಿಯನ್ನು ತಿಳಿದುಕೊಳ್ಳಲು ಬಯಸಿರುವ ಹಿನ್ನೆಲೆಯಲ್ಲಿ ಬೇರೆ ರಾಜ್ಯಗಳಿಗೆ ಸಮಿತಿ ಕಳುಹಿಸಲು ಸರಕಾರ ಮುಂದಾಗಿದೆ ಎಂದು ಸಚಿವರು ತಿಳಿಸಿದರು. ನಾವು ಈಗಾಗಲೇ ಈ ಮೂರು ರಾಜ್ಯಗಳಿಗೆ ಪತ್ರ ಬರೆದು ದ್ವಿಭಾಷೆ ಅಳವಡಿಕೆ ಬಗ್ಗೆ ಮಾಹಿತಿ ನೀಡುವಂತೆ ಕೇಳಿದ್ದೆವು. ಆದರೆ ಈ ರಾಜ್ಯಗಳಿಂದ ಸಮರ್ಪಕ ಪ್ರತಿಕ್ರಿಯೆ ಬಂದಿಲ್ಲ. ಆದ್ದರಿಂದ ನಾವೇ ಈಗ ತಂಡ ಕಳುಹಿಸಲು ಮುಂದಾಗಿದ್ದೇವೆ. ನಮ್ಮ ತಂಡ ನೀಡುವ ವರದಿಯನ್ನು ಕಾನೂನು ಇಲಾಖೆಗೆ ಸಲ್ಲಿಸುತ್ತೇವೆ ಎಂದು ಶಿವರಾಜ ತಂಗಡಿ ಭರವಸೆ ನೀಡಿದರು. ಪ್ರತಾಪಸಿಂಹ ನಾಯಕ್ ಮಾತನಾಡಿ, 20-25 ವರ್ಷಗಳಿಂದ ತುಳುವಿಗೆ ಅಧಿಕೃತ ಸ್ಥಾನಮಾನ ನೀಡುವ ಪ್ರಯತ್ನ ನಡೆಯುತ್ತಿದೆ. ಆದರೆ ಇನ್ನೂ ಸಿಕ್ಕಿಲ್ಲ. ಇದಕ್ಕೆ ಕಾರಣವೇನು ಎಂದು ಸರಕಾರ ತಿಳಿಸಬೇಕು ಎಂದು ಆಗ್ರಹಿಸಿದರು. ಹರೀಶ್ಕುಮಾರ್ ಮಾತನಾಡಿ, ತುಳುವನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಪ್ರಯತ್ನ ನಡೆಯಬೇಕು ಎಂದು ಆಗ್ರಹಿಸಿದರು. ಭಾರತಿ ಶೆಟ್ಟಿ ಹಾಗೂ ತೇಜಸ್ವಿನಿ ಅವರು ದನಿಗೂಡಿಸಿದರು
Trending
- ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಹ್ವಾನ..!
- ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ , ವೈದ್ಯ ಸಂಘ ಅಧ್ಯಕ್ಷರುಗಳಿಗೆ ಗೌರವ ಸನ್ಮಾನ
- ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಆಯ್ಕೆ
- ಬಲೆ ತುಳು ಓದುಗ : (ಜೂನ್ 30) ; ಅಕಾಡೆಮಿಗೆ ಅಲೋಶಿಯಸ್ ವಿದ್ಯಾರ್ಥಿಗಳ ಭೇಟಿ
- ಮದುವೆಯಾಗುವುದಾಗಿ ನಂಬಿಸಿ ಯುವಕನಿಂದ ದ್ರೋಹ : ಸಂತ್ರಸ್ತ ಯುವತಿಯಿಂದ ಮಗುವಿಗೆ ಜನ್ಮ…!
- ತುಳುನಾಡ ರಕ್ಷಣಾ ವೇದಿಕೆ ಬ್ರಹ್ಮಾವರ ತಾಲೂಕು ನೂತನ ಪದಾಧಿಕಾರಿಗಳ ಆಯ್ಕೆ
- ಎಮ್.ಸಿ.ಸಿ. ಬ್ಯಾಂಕಿನಿಂದ ನೋಟ್ ಪುಸ್ತಕ,ಕೊಡೆ ಮತ್ತು ಸ್ಕೂಲ್ ಬ್ಯಾಗ್ ವಿತರಣೆ
- ತುಳು ನಾಟಕ ಕಾರ್ಯಗಾರ ಉದ್ಘಾಟನೆ, ಕಾಲೇಜ್ ವಿದ್ಯಾರ್ಥಿಗಳಿಗೆ ತುಳು ನಾಟಕದ ಅಭಿರುಚಿ ಮೂಡಿಸುವುದು ಅಗತ್ಯ : ತಮ್ಮ ಲಕ್ಷ್ಮಣ